HomePolitics Newsಫೆ 29ರ ಬದಲಾಗಿ ಮಾರ್ಚ್ 2ರಂದು ಗ್ಯಾರಂಟಿ ಸಮಾವೇಶ

ಫೆ 29ರ ಬದಲಾಗಿ ಮಾರ್ಚ್ 2ರಂದು ಗ್ಯಾರಂಟಿ ಸಮಾವೇಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ : ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಗ್ಯಾರಂಟಿ ಯೋಜನೆಯ ಪಲಾನುಭವಿಗಳ ಸಮಾವೇಶವನ್ನು ಫೆ.29ರಂದು ತಾಲೂಕಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಸಮಾವೇಶವನ್ನು ಮಾರ್ಚ್ 2ರಂದು ನಡೆಸಲು ಉದ್ದೇಶಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಫೆ.29ರಂದು ಸಮಾವೇಶ ನಡೆಸಬೇಕು ಎಂಬ ಉದ್ದೇಶದಿಂದ ಶಾಸಕ ಜಿ.ಎಸ್. ಪಾಟೀಲ ತಾಲೂಕಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದರು. ಅಲ್ಲದೆ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿತ್ತು. ತಾಲೂಕಾ ಕ್ರೀಡಾಂಗಣದಲ್ಲಿ ಬೃಹತ್ ಶಾಮಿಯಾನ ಹಾಕಲಾಗಿತ್ತು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು.
ಆದರೆ ರಾಜ್ಯ ಸಭೆ ಚುನಾವಣೆ ಜೊತೆಗೆ ಫೆ.29ರಂದು ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಪಲಾನುಭವಿಗಳ ಸಮಾವೇಶ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ರೋಣದಲ್ಲಿ ನಡೆಯಬೇಕಿದ್ದ ಸಭೆಯನ್ನು ಮಾರ್ಚ್ 2ರಂದು ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ರೋಣ ತಹಸೀಲ್ದಾರ ನಾಗರಾಜ.ಕೆ. ಪ್ರತಿಕ್ರಿಯಿಸಿ, ಸರಕಾರದ ಗ್ಯಾರಂಟಿ ಯೋಜನೆಯ ಪಲಾನುಭವಿಗಳ ಸಮಾವೇಶವನ್ನು ಫೆ.29ರ ಬದಲಾಗಿ ಮಾರ್ಚ್ ೨ರಂದು ಈಗ ನಿಗದಿಯಾಗಿರುವ ತಾಲೂಕಾ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟನೆಯನ್ನು ನೀಡಲಾಗುವುದು ಎಂದಿದ್ದಾರೆ.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!