HomeGadag Newsಗ್ಯಾರಂಟಿ ಯೋಜನೆಯಿಂದ ಬಡವರ ಬದುಕಿನಲ್ಲಿ ಮಂದಹಾಸ

ಗ್ಯಾರಂಟಿ ಯೋಜನೆಯಿಂದ ಬಡವರ ಬದುಕಿನಲ್ಲಿ ಮಂದಹಾಸ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಮೂಲಭೂತ ಹಕ್ಕುಗಳನ್ನಾಗಿ ಮಾಡುವ ಧ್ವನಿ ದೇಶದಲ್ಲೆಡೆ ಹರಡಬೇಕಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿಯನ್ನೂ ಆರ್ಥಿಕ ಸಬಲರನ್ನಾಗಿ ಮಾಡಿ ಸ್ವಾವಲಂಬಿ ಹಾಗೂ ಸುಧಾರಿತ ಜೀವನ ನಡೆಸುವಂತೆ ಮಾಡುವುದು ಪಂಚ ಗ್ಯಾರಂಟಿ ಯೋಜನೆಯ ಉದ್ದೇಶವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.

ನಗರದ ಮುಳಗುಂದ ನಾಕಾ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಎದುರಿನ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ ಅವರ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಯ ಸೌಲಭ್ಯಗಳ ಸದುಪಯೋಗವಾಗುವುದರೊಂದಿಗೆ ಬಡಜನರ ಬದುಕಿನಲ್ಲಿ ಸಂತಸ, ಸಮಾಧಾನ ತಂದಿದೆ. ಬಡಜನರ ಜೀವನಮಟ್ಟವನ್ನು ಎತ್ತರಕ್ಕೆ ಕೊಂಡೊಯ್ಯುವುದಕ್ಕೆ ಗ್ಯಾರಂಟಿ ಹಣವು ವಿನಿಯೋಗವಾಗಬೇಕು. ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯನ್ನು ಹೊಂದುವುದು ಗ್ಯಾರಂಟಿ ಯೋಜನೆಯಿಂದ ಸಾಧಿಸಬಹುದಾಗಿದೆ. ದೇಶದ ಅಭಿವೃದ್ಧಿಯೆಂದರೆ ಬಡಜನರ, ರೈತರ, ಶ್ರಮಿಕ ವರ್ಗದವರು ಶಿಸ್ತಿನ ಜೀವನ ನಡೆಸುವುದಾಗಿದೆ. ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದು ಕಾರ್ಯಕರ್ತರ ಹಾಗೂ ಸರ್ಕಾರದ ಕರ್ತವ್ಯವಾಗಿದೆ. ಬಡವರ ಬದುಕಿನಲ್ಲಿ ಗ್ಯಾರಂಟಿ ಯೋಜನೆ ನಗೆ ಮೂಡಿಸಿದೆ ಎಂದರು.

ಗ್ಯಾರಂಟಿ ಯೋಜನೆಯ ಹಣದಿಂದ ಬೋರವೆಲ್ ಕೊರೆಸುವುದು, ಬಳೆ ಅಂಗಡಿ, ಸ್ಟೇಷನರಿ ಅಂಗಡಿ, ಗ್ರಂಥಾಲಯ, ಬಂಗಾರದ ಒಡವೆ ಖರೀದಿ ಸೇರಿ ಇನ್ನೂ ಹಲವಾರು ಕೆಲಸಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸದುಪಯೋಗವಾಗಿರುವುದು ಹೆಮ್ಮೆ ತಂದಿದೆ ಎಂದು ಹೇಳಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ಗದಗ ವಿಧಾನಸಭಾ ಕ್ಷೇತ್ರ ಹಾಗೂ ಗದಗ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ 100ಕ್ಕೆ 100ರಷ್ಟು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ನೀಲಮ್ಮ ಬೋಳನವರ, ಹೇಮಂತಗೌಡ ಪಾಟೀಲ, ಶರಣಪ್ಪ ಬೆಟಗೇರಿ, ಪಿ.ಬಿ. ಅಳಗವಾಡಿ, ದೀಪಕ ಲಮಾಣಿ, ಸದಸ್ಯರಾದ ರೂಪಾ ಅಂಗಡಿ, ಶಿವನಗೌಡ ಪಾಟೀಲ, ಶರೀಫ್ ಬಿಳಿಯಲಿ, ಬಸವರಾಜ ಬೆಳದಡಿ, ವಿವೇಕ ಯಾವಗಲ್, ದೇವಪ್ಪ ಮೋರನಾಳ, ಪುಲಕೇಶಗೌಡ ಪಾಟೀಲ, ವಿರೂಪಾಕ್ಷಪ್ಪ ಯಾರಸಿ, ಈಶಣ್ಣ ಹುಣಸಿಕಟ್ಟಿ, ರಾಜೀವ ಗೊಡಚಪ್ಪ ಕುಂಬ, ಗೀತಾ ಸುರೇಶ ಬೀರಣ್ಣವರ, ವೀರಯ್ಯ ಮಠಪತಿ, ಫಕ್ರುಸಾಬ ಚಿಕ್ಕಮಣ್ಣೂರ, ಆರ್.ಆರ್. ಗಡ್ಡದ್ದೇವರಮಠ, ಗದಗ ತಾಲೂಕು ಮಟ್ಟದ ಸಮಿತಿಯ ಸದಸ್ಯರುಗಳಾದ ಕೃಷ್ಣಗೌಡ ಎಚ್.ಪಾಟೀಲ, ಶ್ರೀಮತಿ ಮೀನಾಕ್ಷಿ ಬೆನಕಣ್ಣವರ, ದೇವರಡ್ಡಿ ತಿರ್ಲಾಪುರ, ಶಂಭು ಕಾಳೆ, ರಮೇಶ ಹೊನ್ನಿನಾಯ್ಕರ್, ಭಾಷಾಸಾಬ ಮಲ್ಲಸಮುದ್ರ, ದಯಾನಂದ ಪವಾರ, ನಿಂಗಪ್ಪ ದೇಸಾಯಿ, ಸಂಗಮೇಶ ಕೆರಕಲಮಟ್ಟಿ, ಸಂಗಮೇಶ ಹಾದಿಮನಿ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಸಾವಿತ್ರಿ ಹೂಗಾರ ಸೇರಿದಂತೆ ಗದಗ ಜಿಲ್ಲಾ ಹಾಗೂ ತಾಲೂಕು ಪ್ರಾಧಿಕಾರದ ಸದಸ್ಯರು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ ಮುಂತಾದವರು ಸಮಾರಂಭದಲ್ಲಿ ಹಾಜರಿದ್ದರು. ವೆಂಕಟೇಶ ಅಲ್ಕೋಡ ನಾಡಗೀತೆ ಪ್ರಸ್ತುತಪಡಿಸಿದರು. ಆನಂದಯ್ಯ ವಿರಕ್ತಿಮಠ ಕಾರ್ಯಕ್ರಮ ನಿರೂಪಿಸಿದರು.ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಕೊರವನವರ ವಂದಿಸಿದರು.

“ಜಿಲ್ಲೆಯಲ್ಲಿ ಶೇ. 97.96ರಷ್ಟು ಗೃಹಲಕ್ಷ್ಮೀ ಯೋಜನೆ ತಲುಪಿದೆ. ಮರಣ ಹೊಂದಿದ ಹಾಗೂ ಜಿಎಸ್ಟಿ ಹೊಂದಿದ ಮಹಿಳೆಯರಿಗೆ ಯೋಜನೆ ತಲುಪಿಸಲು ಸಾಧ್ಯವಾಗಿಲ್ಲ. ಮರಣ ಹೊಂದಿದ ಮಹಿಳೆಯ ವಾರಸುದಾರರಿಗೆ ಯೋಜನೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಬಂದ ಹಣದಿಂದ ಬದುಕಲ್ಲಿ ಬದಲಾವಣೆಗಾಗಿ ಉಪಯೋಗ ಮಾಡಿಕೊಂಡು ಸುಧಾರಣೆಯಾಗಬೇಕು ಎಂಬುದೇ ಪಂಚ ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶವಾಗಿದೆ”

– ಎಚ್.ಕೆ. ಪಾಟೀಲ.

ಸಚಿವರು, ಗದಗ.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ರಾಜ್ಯದಲ್ಲಿ ಹಾಗೂ ಬೆಳಗಾವಿ ವಿಭಾಗದಲ್ಲಿ ಅತ್ಯಂತ ಯಶಸ್ವಿಯಾಗಿ ಪಂಚ ಗ್ಯಾರಂಟಿ ಯೋಜನೆಗಳು ಸಾಕಾರಗೊಂಡಿವೆ. 52 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಯಿಲ್ಲದೇ ನೇರವಾಗಿ ತಲುಪಿಸಿದ್ದು ದೇಶದಲ್ಲೇ ಮೊದಲು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಜಿಲ್ಲೆಯೊಳಗೆ ಮನೆಮನೆಗೆ ಹೋಗಿ ನಿಜವಾದ ಬಡವರನ್ನು ಗುರುತಿಸಿ ನಮ್ಮ ಪಕ್ಷದ ಕಾರ್ಯಕರ್ತರು ಅರ್ಜಿಯನ್ನು ತುಂಬಿಸಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯನ್ನು ತಲುಪಿಸಿದ್ದಾರೆ. ಯಾವುದೇ ಫಲಾನುಭವಿ ಗ್ಯಾರಂಟಿ ಯೋಜನೆಯಿಂದ ವಂಚಿತರಾಗದಂತೆ ಪ್ರತಿ ತಿಂಗಳು ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!