HomeUncategorizedವ್ಯಕ್ತಿತ್ವ ವಿಕಸನಕ್ಕಾಗಿ ಮಾರ್ಗದರ್ಶನ, ಸಂವಾದ

ವ್ಯಕ್ತಿತ್ವ ವಿಕಸನಕ್ಕಾಗಿ ಮಾರ್ಗದರ್ಶನ, ಸಂವಾದ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಗ್ರಾಮಾಂತರ ವಿಭಾಗೀಯ ಕಛೇರಿ ಧಾರವಾಡದಲ್ಲಿ ಸಂಸ್ಥೆಯ ನೌಕರರ ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಮಾರ್ಗದರ್ಶನ ಮತ್ತು ಸಂವಾದ ಕಾರ್ಯಕ್ರಮವನ್ನು ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ ಅವರ ಮಾರ್ಗದರ್ಶನದಲ್ಲಿ ಏರ್ಪಡಿಸಲಾಗಿತ್ತು. ಸಂಸ್ಥೆಯ ಏಳಿಗೆಗಾಗಿ ಸಾರ್ವಜನಿಕ ಸೇವೆ ಮಾಡುತ್ತಿರುವ ಸಂಸ್ಥೆಯ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳ ಮಕ್ಕಳಿಗಾಗಿ ಧಾರವಾಡ ಗ್ರಾಮಾಂತರ ವಿಭಾಗದ ಕಾರ್ಮಿಕ ಇಲಾಖೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ, ನಿಮ್ಮೆಲ್ಲರ ತಂದೆ-ತಾಯಿಗಳು ಸಂಸ್ಥೆಯಲ್ಲಿ ಅತ್ಯವಶ್ಯವಾದ ಸಾರ್ವಜನಿಕ ಸೇವೆ ಸಲ್ಲಿಸುತ್ತಿದ್ದಾರೆ. ಸಂಸ್ಥೆಯ ಬಹಳಷ್ಟು ಸಿಬ್ಬಂದಿಗಳು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕುರಿತ ಚಿಂತೆಯಲ್ಲಿರುತ್ತಾರೆ. ನೀವು ಕಷ್ಟಪಟ್ಟು ಚೆನ್ನಾಗಿ ಓದುತ್ತಿದ್ದೀರಾ ಎಂದು ಗೊತ್ತಾದರೆ ನಿಮ್ಮ ಪಾಲಕರು ಸಹ ನೆಮ್ಮದಿಯಿಂದ ಸಂಸ್ಥೆಯಲ್ಲಿ ತಮ್ಮ ತಮ್ಮ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ.

ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆಯತ್ತ ಮುನ್ನಡೆಯಬೇಕು. ನಾವು ಕಷ್ಟಪಟ್ಟು ಓದಿದಾಗ ಮಾತ್ರ ಉನ್ನತವಾದ ಎತ್ತರಕ್ಕೆ ಬೆಳೆಯಲು ಸಾಧ್ಯ. ನಾವು ಯಾವುದಕ್ಕೆ ಆದ್ಯತೆ ಕೊಡುತ್ತೇವೆ ಎಂಬುದರ ಮೇಲೆ ನಮ್ಮ ಭವಿಷ್ಯ ನಿರ್ಧಾರವಾಗುತ್ತದೆ. ನಿಮ್ಮ ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಂಡು ಒಳ್ಳೆಯ ಸಾಧನೆ ಮಾಡಿ ನಿಮ್ಮ ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತಂದುಕೊಡಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳಾದ ಪಿ.ವೈ. ನಾಯಕ, ಧಾರವಾಡ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಡಾ. ಶಶಿಧರ ಚನ್ನಪ್ಪಗೌಡರ್, ವಿಭಾಗೀಯ ಸಂಚಾರಾಧಿಕಾರಿಗಳಾದ ಸಂತೋಷ ಕಮತ್, ವಿಭಾಗೀಯ ತಾಂತ್ರಿಕ ಶಿಲ್ಪಿಗಳಾದ ನಿಂಗನಗೌಡ ಪಾಟೀಲ ಹಾಗೂ ಅಧಿಕಾರಿಗಳಾದ ವಿವೇಕಾನಂದ ಘುಳಪ್ಪನವರ, ಇಸ್ಮಾಯಿಲ್ ನವಲಗುಂದ, ಶಂಕರಪ್ಪ, ನವೀನಕುಮಾರ್ ತಿಪ್ಪಾ ಮತ್ತು ಸಂಸ್ಥೆಯ ಸಿಬ್ಬಂದಿಗಳ ಮಕ್ಕಳು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!