ಶ್ರೀರಂಗಪಟ್ಟಣ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ಉಪಚರಿಸಿ ಸ್ಥಳೀಯರು ಮೈಸೂರು ಹಾಗು ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಘಘಾತವಾದಾಗ ಪಕ್ಕದಲ್ಲೆ ಜೆಸಿಬಿ ಹಾದು ಹೋಗಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಸಾವಿನಿಂದ ಪಾರಾಗಿದ್ದಾನೆ. ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



