ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು 59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆಯಿತು.
ಎರಡೂ ಅರ್ಜಿಗಳ ಕುರಿತ ವಾದ-ಪ್ರತಿವಾದ ಆಲಿಸಿದ ಕೋರ್ಟ್, ಆದೇಶವನ್ನು ಅಕ್ಟೋಬರ್ 5ಕ್ಕೆ ಕಾಯ್ದಿರಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ಅವರನ್ನು ಕೋರ್ಟ್‌ಗೆ ಕರೆತರುವ ಸಂದರ್ಭದಲ್ಲಿ ಅವರು ಯಾರೊಂದಿಗೂ ಮಾತನಾಡಲು ಅವಕಾಶ ನೀಡಬಾರದು ಎಂದು ಕೋರಿ ದರ್ಶನ್ ಪರ ವಕೀಲರು ಒಂದು ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಪ್ರದೋಷ್ ಕೋರ್ಟ್‌ಗೆ ಬಂದಾಗ ಬೇರೆ ಯಾರನ್ನೂ ಭೇಟಿಯಾಗಲು ಅವಕಾಶ ನೀಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಈ ಅರ್ಜಿಯನ್ನು ಸಿಆರ್‌ಪಿಸಿ ಸೆಕ್ಷನ್ 267 ಹಾಗೂ ಬಿಎನ್‌ಎಸ್‌ಎಸ್ ಸೆಕ್ಷನ್ 302ರ ಅಡಿಯಲ್ಲಿ ಸಲ್ಲಿಸಲಾಗಿದೆ.
ಇನ್ನು ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಅರ್ಜಿ ಸಲ್ಲಿಸಲಾಗಿದೆ. ಎವಿಡೆನ್ಸ್ ಆ್ಯಕ್ಟ್‌ನ ಸೆಕ್ಷನ್ 137 ಮತ್ತು 138ರ ಅಡಿಯಲ್ಲಿ ಸಲ್ಲಿಸಿರುವ ಈ ಅರ್ಜಿಯಲ್ಲಿ, ನಿನ್ನೆ ಮರೆತಿದ್ದ ಅಂಶವನ್ನು ಇಂದು ಮಾಫಿ ಸಾಕ್ಷಿ ಹೇಳಿಕೆಗೆ ಸೇರಿಸಲು ಅವಕಾಶ ನೀಡಬಾರದು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ.
ಈ ಅರ್ಜಿಗೆ ಸಂಬಂಧಿಸಿದಂತೆ ಎಸ್‌ಪಿಪಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.
ಎರಡೂ ಅರ್ಜಿಗಳ ಕುರಿತ ವಾದ-ಪ್ರತಿವಾದ ಆಲಿಸಿದ 59ನೇ ಸಿಸಿಹೆಚ್ ಕೋರ್ಟ್, ಅರ್ಜಿಗಳ ಆದೇಶವನ್ನು ಅಕ್ಟೋಬರ್ 5ಕ್ಕೆ ಕಾಯ್ದಿರಿಸಿದೆ.



