HomeKarnataka Newsರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ: ಕರಾವಳಿಯಲ್ಲಿ ಹೀಟ್‌ ವೇವ್ ಎಚ್ಚರಿಕೆ, ಹಲವೆಡೆ ಆಲಿಕಲ್ಲು ಮಳೆ ಸಾಧ್ಯತೆ

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ: ಕರಾವಳಿಯಲ್ಲಿ ಹೀಟ್‌ ವೇವ್ ಎಚ್ಚರಿಕೆ, ಹಲವೆಡೆ ಆಲಿಕಲ್ಲು ಮಳೆ ಸಾಧ್ಯತೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದ ಹಲವೆಡೆ ತಾಪಮಾನದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳು ಬಿಸಿಲಿನ ಬೇಗೆಗೆ ತತ್ತರಿಸುತ್ತಿವೆ. ವಿಶೇಷವಾಗಿ ಕರಾವಳಿ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಉಷ್ಣ ಅಲೆ ತೀವ್ರಗೊಂಡಿದೆ. ಇದೇ ವೇಳೆ, ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ದಿನಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸಾಕಷ್ಟು ನೀರು ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಭಾಗಗಳಲ್ಲಿ ಒಣಹವಾಮಾನ ಮುಂದುವರಿಯಲಿದೆ. ಜೊತೆಗೆ, 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನೊಂದೆಡೆ, ಕರಾವಳಿ ಭಾಗಗಳಲ್ಲಿ ತಾಪಮಾನ ಏರಿಕೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೀಟ್‌ವೇವ್ ಎಚ್ಚರಿಕೆ ನೀಡಲಾಗಿದ್ದು, ಜೊತೆಗೆ ಗಾಳಿ-ಮಳೆಯ ಸಂಭವವೂ ಇದೆ. ಮುಂದಿನ ಐದು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ತಾಪಮಾನ ಹೆಚ್ಚಳದ ಹಿನ್ನೆಲೆ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸಿ, ಬೇಸಿಗೆ ರಜೆಯಲ್ಲಿ ಮಕ್ಕಳನ್ನು ಬಿಸಿಲಲ್ಲಿ ಹೆಚ್ಚು ಸಮಯ ಆಟವಾಡಲು ಬಿಡಬಾರದು ಎಂದು ಸಲಹೆ ನೀಡಲಾಗಿದೆ.

ಉಷ್ಣ ಅಲೆ ಮತ್ತು ಹೀಟ್ ಸ್ಟ್ರೋಕ್‌ನಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ನೇರ ಸೂರ್ಯಕಿರಣಗಳಿಗೆ ಮೈಯೊಡ್ಡುವುದನ್ನು ತಪ್ಪಿಸುವುದು, ನಿಯಮಿತವಾಗಿ ನೀರು ಕುಡಿಯುವುದು, ಎಳನೀರು, ಮಜ್ಜಿಗೆ ಹಾಗೂ ಹಣ್ಣಿನ ರಸಗಳನ್ನು ಸೇವಿಸುವುದು ಅಗತ್ಯ. ತಿಳಿ ಬಣ್ಣದ, ಸಡಿಲ ಹತ್ತಿ ಬಟ್ಟೆಗಳನ್ನು ಧರಿಸುವುದು, ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿ ಬಳಸುವುದು ಉತ್ತಮ. ಕಾಫಿ, ಟೀ ಹಾಗೂ ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳನ್ನು ಕಡಿಮೆ ಸೇವಿಸುವಂತೆ ಆರೋಗ್ಯ ತಜ್ಞರು ಸೂಚಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!