HomeKarnataka Newsರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ: 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ: 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ವರುಣನ ಅರ್ಭಟ ಮುಂದುವರಿಯುವ ನಿರೀಕ್ಷೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ವೈಪರೀತ್ಯದ ಹಿನ್ನೆಲೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆಯು ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!