HomeKarnataka Newsಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ: ಇಲ್ಲೆಲ್ಲಾ ಅಲರ್ಟ್!

ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ: ಇಲ್ಲೆಲ್ಲಾ ಅಲರ್ಟ್!

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!