HomeKarnataka Newsಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

For Dai;y Updates Join Our whatsapp Group

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಇಂದಿನಿಂದ ಜುಲೈ 31ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಅತಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ತಗ್ಗು ಪ್ರದೇಶದ ನಿವಾಸಿಗಳು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ 28 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದರೆ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ವೈಪರೀತ್ಯ ಹಾಗೂ ಬಲವಾದ ಗಾಳಿಯ ಹಿನ್ನೆಲೆ ಸಾರ್ವಜನಿಕರು ಅನಗತ್ಯ ಪ್ರಯಾಣ ತಪ್ಪಿಸಿ, ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img