HomeGadag Newsಸಿಎಂ ಆಗಮನದ ವೇಳೆ ಹೆಲಿಪ್ಯಾಡ್‌ನಲ್ಲಿ ಹೈಡ್ರಾಮಾ: ಪೊಲೀಸರೊಂದಿಗೆ ಕಾರ್ಯಕರ್ತರ ವಾಗ್ವಾದ

ಸಿಎಂ ಆಗಮನದ ವೇಳೆ ಹೆಲಿಪ್ಯಾಡ್‌ನಲ್ಲಿ ಹೈಡ್ರಾಮಾ: ಪೊಲೀಸರೊಂದಿಗೆ ಕಾರ್ಯಕರ್ತರ ವಾಗ್ವಾದ

For Dai;y Updates Join Our whatsapp Group

ಗದಗ: ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗಕ್ಕೆ ಆಗಮಿಸಿದರು.

ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ನಲ್ಲಿ ಇಳಿದರು. ಈ ವೇಳೆ ಪೊಲೀಸ್ ಇಲಾಖೆಯ ವತಿಯಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಆವರಣ ಹಾಗೂ ಹೆಲಿಪ್ಯಾಡ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಸಚಿವರು, ಶಾಸಕರು ಹಾಗೂ ಪ್ರಮುಖ ಮುಖಂಡರಿಗೆ ಮಾತ್ರ ಹೆಲಿಪ್ಯಾಡ್ ಆವರಣ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಗಮನದ ಸುದ್ದಿ ತಿಳಿದು ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಹೆಲಿಪ್ಯಾಡ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಆದರೆ, ಬಿಗಿ ಭದ್ರತೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಹೆಲಿಪ್ಯಾಡ್ ಆವರಣ ಪ್ರವೇಶಿಸಲು ಅವಕಾಶ ನೀಡದಿದ್ದರಿಂದ ಕೆಲ ಕಾರ್ಯಕರ್ತರು ಅಸಮಾಧಾನಗೊಂಡರು.

ತಮ್ಮನ್ನೂ ಒಳಗಡೆ ಬಿಡುವಂತೆ ಪಟ್ಟು ಹಿಡಿದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಸಣ್ಣಪುಟ್ಟ ಮುಖಂಡರು ಹಾಗೂ ಕಾರ್ಯಕರ್ತರಿಗೂ ಪ್ರವೇಶ ನೀಡಬೇಕು ಎಂದು ಅವರು ಆಗ್ರಹಿಸಿದರು. ಕಾರ್ಯಕರ್ತರ ವರ್ತನೆಯಿಂದ ಪೊಲೀಸ್ ಅಧಿಕಾರಿಗಳು ಅಸಮಾಧಾನಗೊಂಡಿದ್ದು, ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಬರ ಪರಿಸ್ಥಿತಿ ವೀಕ್ಷಣೆಗೆ ಮುಂಡರಗಿ ತಾಲೂಕಿನ ಕದಂಪೂರ ಗ್ರಾಮದ ಸಮೀಪದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ. ಬರದ ಪರಿಣಾಮದಿಂದ ಸಂಕಷ್ಟಕ್ಕೀಡಾಗಿರುವ ರೈತರ ಜಮೀನುಗಳಲ್ಲಿ ಬೆಳೆದಿರುವ ಮೆಕ್ಕೆಜೋಳ, ಸೂರ್ಯಕಾಂತಿ, ಈರುಳ್ಳಿ ಹಾಗೂ ಹತ್ತಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಲಿದ್ದಾರೆ.

ರೈತರಾದ ಕಲ್ಲಪ್ಪ, ಶಂಕ್ರಪ್ಪ ಹಾಗೂ ಸುನಿತಾ ಪೂಜಾರ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ, ಬೆಳೆ ಹಾನಿ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟದ ಕುರಿತು ಮಾಹಿತಿ ಪಡೆಯಲಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ, ಶಾಸಕ ಎಚ್.ಕೆ. ಪಾಟೀಲ ಸೇರಿದಂತೆ ಸಚಿವರು, ಶಾಸಕರು ಹಾಗೂ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಬರ ಪರಿಸ್ಥಿತಿ ಪರಿಶೀಲನೆಯ ಜೊತೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳಲಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img