ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ದೇಶವನ್ನು ಬಹಳಷ್ಟು ಮುಸ್ಲಿಂ ರಾಜರು, ಬ್ರಿಟಿಷರು ನೂರಾರು ವರ್ಷಗಳ ಕಾಲ ಆಳಿ ಹೋದರೂ ನಮ್ಮ ಹಿಂದೂ ಸಂಸ್ಕೃತಿಯನ್ನು ಅಳಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ ಎಂದು ಖ್ಯಾತ ವೈದ್ಯ ಡಾ. ಪ್ರಕಾಶ ಸಂಕನೂರ ಅಭಿಪ್ರಾಯಪಟ್ಟರು.
ನಗರದ ಹಳೇ ಸರಾಫ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರ್ಬಾರ ವೇದಿಕೆಯಲ್ಲಿ ಜರುಗಿದ ನಮ್ಮೂರ ದಸರಾ-2025ರ 4ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ಅಖಂಡ ಭಾರತವನ್ನು ಒಂದುಗೂಡಿಸಲು ನಮ್ಮ ಹಿಂದೂ ಸಂಸ್ಕೃತಿ ಮೂಲ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಹಿಂದೂ ಸಂಸ್ಕೃತಿಯನ್ನು ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಅಪ್ಪಗೊಳ್ಳುತ್ತಿದ್ದಾರೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಶ್ರೇಷ್ಠವಾದ ನಮ್ಮ ಹಿಂದೂ ಸಂಸ್ಕೃತಿಯ ಆಚಾರ-ವಿಚಾರಗಳು ಕಾರಣವಾಗಿವೆ ಎಂದು ಹೇಳಿದರು.
ಎಸ್‌ಎಸ್‌ಕೆ ಸಮಾಜದ ಪಂಚ ಕಮಿಟಿ ಅಧ್ಯಕ್ಷ ಫಕೀರಸಾ ಬಾಂಡಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಉಪಾಧ್ಯಕ್ಷ ರಾಜು ಬದಿ, ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ, ರವಿ ಶಿದ್ಲಿಂಗ, ದಸರಾ ಕಮಿಟಿ ಚೇರ್ಮನ್ ಅನಿಲ್ ಖಟವಟೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಂಚ ಕಮಿಟಿ ಸದಸ್ಯರಾದ ವಿಶ್ವನಾಥಸಾ ಖಟವಟೆ, ಸುರೇಶಕುಮಾರ ಬದಿ, ಬಲರಾಮ ಬಸವಾ, ಪರಶುರಾಮ ಬದಿ, ವಿಷ್ಣುಸಾ ಶಿದ್ಲಿಂಗ, ಶ್ರೀನಿವಾಸ ಬಾಂಡಗೆ, ಮಾರುತಿ ಪವಾರ, ಪ್ರಕಾಶ ಬಾಕಳೆ, ಅಂಬಾಸಾ ಖಟವಟೆ, ಗಣಪತಿ ಜಿತೂರಿ, ವಿನೋದ ಬಾಂಡಗೆ, ತರುಣ ಸಂಘದ ವಿಶ್ವನಾಥಸಾ ಸೂಳಂಕಿ, ರಾಘು ಬಾರಡ, ಶ್ರೀಕಾಂತ ಬಾಕಳೆ, ಸುಧೀರ ಕಾಟಿಗರ, ಅಶೋಕ ಬೇವಿನಕಟ್ಟಿ, ವೆಂಕಟೇಶ ಹಬೀಬ, ಮಾಧು ಬದಿ, ನಾಗರಾಜ ಖೋಡೆ, ಮಹಿಳಾ ಮಂಡಳದ ಅಧ್ಯಕ್ಷೆ ಉಮಾಬಾಯಿ ಬೇವಿನಕಟ್ಟಿ, ಗೀತಾಬಾಯಿ ಹಬೀಬ ಮುಂತಾದವರು ಉಪಸ್ಥಿತರಿದ್ದರು.
ಗಂಗಾಧರ ಹಬೀಬ ಸ್ವಾಗತಿಸಿದರು. ಜಿ.ಎನ್. ಹಬೀಬ ನಿರೂಪಿಸಿದರು. ಮೋತಿಲಾಲಸಾ ಪೂಜಾರಿ ವಂದಿಸಿದರು.
ಹಿರಿಯ ಮೋಟಾರ್ ವಾಹನ ನಿರೀಕ್ಷಕ ಅರುಣ ಕಟ್ಟಿಮನಿ ಮಾತನಾಡಿ, ಯಾರಾದರೂ ಸಂಪತ್ತನ್ನು ಹೊಂದಿದ್ದರೆ ಅವರು ಆರೋಗ್ಯವನ್ನು ಹುಡುಕುತ್ತಾ ಹೋಗುತ್ತಾರೆ. ಆದರೆ, ಯಾರಲ್ಲಾದರೂ ಉತ್ತಮ ಆರೋಗ್ಯವಿದ್ದರೆ ಅವರ ಹತ್ತಿರ ಸಂಪತ್ತು ಹುಡುಕಿಕೊಂಡು ಬರುತ್ತದೆ. ಅದ್ದರಿಂದ ನಾವು ಸಂಪತ್ತು ಗಳಿಸುವ ಒತ್ತಡದಲ್ಲಿ ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದೇವೆ. ಸಮಯ ಸಿಕ್ಕಾಗ ದೇವರ ಭಜನೆ, ಪ್ರಾರ್ಥನೆ ಮಾಡುವ ಮೂಲಕ ನೆಮ್ಮದಿ ಕಾಣಬಹುದು. ಅಂತಹ ಶಕ್ತಿ ಪ್ರಾರ್ಥನೆಯಲ್ಲಿದೆ ಎಂದು ಹೇಳಿದರು.



