ರಾಮನಗರ:- ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. 25 ವರ್ಷದ ಅಮೀರ್ ಮೃತ ದುರ್ದೈವಿ. ಗೂಡ್ಸ್ ವಾಹನ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



