ಚಿಕ್ಕೋಡಿ:- ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಜರುಗಿದೆ.
ಅಥಣಿ ತಾಲೂಕಿನ ತೆಲಸಂಗ ಗ್ರಾಮದ ನಿವಾಸಿ ರಾಮಪ್ಪ ನಿಂಗಪ್ಪ ಸಾವಳಗಿ ಮೃತ ಬೈಕ್ ಸವಾರ. ಯಲ್ಲಮ್ಮ ದೇವಿಯ ದರ್ಶನ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಐಗಳಿ ಪೊಲೀಸ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.



