HomeIndia Newsದಿವ್ಯಾಗರ್ ಬೀಚ್‌ನಲ್ಲಿ ಭೀಕರ ದುರಂತ: ಸಮುದ್ರದ ಸೆಳೆತಕ್ಕೆ 8 ವಿದ್ಯಾರ್ಥಿಗಳು ಬಲಿ

ದಿವ್ಯಾಗರ್ ಬೀಚ್‌ನಲ್ಲಿ ಭೀಕರ ದುರಂತ: ಸಮುದ್ರದ ಸೆಳೆತಕ್ಕೆ 8 ವಿದ್ಯಾರ್ಥಿಗಳು ಬಲಿ

For Dai;y Updates Join Our whatsapp Group

ಮುಂಬೈ: ಮಹಾರಾಷ್ಟ್ರದ ದಿವ್ಯಾಗರ್ ಬೀಚ್‌ಗೆ ಪ್ರವಾಸಕ್ಕೆ ತೆರಳಿದ್ದ ಪುಣೆಯ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ತನ್ಮಯ ದತ್ತಾತ್ರೇಯ ವಾಹಿಲೆ, ಸುಮಿತ್ ಭರತ್ ಅಹಿರೇ, ಪ್ರಣವ್ ರಾಮದಾಸ್ ಬನ್ಸೋಡೆ, ಕೈವಲ್ಯ ಸತೀಶ್ ವಸಂಕರ್, ರಾಜ್‌ವೀರ್ ಯುವರಾಜ್ ವಾಹಿಲೆ, ಯಶ್ ಕಿರಣ್ ವಾಂಖೆಡೆ, ಸೋಹಮ್ ತುಕಾರಾಂ ಭಂಡವಾಳ್ಕರ್ ಹಾಗೂ ಕೌಸ್ತುಭ್ ಸಂದೀಪ್ ದೌಂಡ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ 16 ವರ್ಷದವರು ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ ಜಿಲ್ಲೆಯ ಅಲಂದಿಯಲ್ಲಿರುವ ‘ವಿನ್ನರ್ಸ್ ಅಕಾಡೆಮಿ’ಯಿಂದ 48 ಮಂದಿ ಪ್ರವಾಸಕ್ಕೆ ಬಂದಿದ್ದರು. ತಂಡದಲ್ಲಿ 25 ಹುಡುಗರು, 17 ಹುಡುಗಿಯರು ಹಾಗೂ 6 ಶಿಕ್ಷಕರು ಇದ್ದರು.

ವಿದ್ಯಾರ್ಥಿಗಳು ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ. ಸಮುದ್ರದ ಆಳ ಮತ್ತು ಅಲೆಗಳ ವೇಗವನ್ನು ಅಂದಾಜಿಸದೆ ನೀರಿಗೆ ಇಳಿದಿರುವುದು ದುರಂತಕ್ಕೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿಹೋದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ವಾಟರ್ ಸ್ಪೋರ್ಟ್ಸ್ ತಂಡದ ಸದಸ್ಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ, 8 ವಿದ್ಯಾರ್ಥಿಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ತಂಡದ ಸದಸ್ಯರು ಸಮುದ್ರದಿಂದ 8 ಮೃತದೇಹಗಳನ್ನು ಹೊರತೆಗೆದಿದ್ದಾರೆ.

ದಿಘಿ ಸಾಗರಿ ಬೋರ್ಲಿ ಪಂಚತನ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img