ರಾಯಚೂರು: ಮಳೆಯ ನಡುವೆಯೂ ಮಂತ್ರಾಲಯಕ್ಕೆ ಭಕ್ತರ ಹರಿವು ನಿರಂತರವಾಗಿ ಹೆಚ್ಚುತ್ತಿದ್ದು, ಸುತ್ತಮುತ್ತಲಿನ ವಸತಿಗೃಹಗಳಲ್ಲಿ ಸಮಸ್ಯೆ ಉಂಟಾಗಿದೆ.
ನಿತ್ಯ ಸುಮಾರು 3 ಸಾವಿರಕ್ಕೂ ಅಧಿಕ ರೂಮ್‌ಗಳು ಸಂಪೂರ್ಣ ಭರ್ತಿಯಾಗಿದ್ದು, ಕನಿಷ್ಠ ವಸತಿಗೂ ಭಕ್ತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಭಕ್ತರ ಸಂಖ್ಯೆ ಹೆಚ್ಚಿದನ್ನು ಗಮನದಲ್ಲಿಟ್ಟುಕೊಂಡು ಮಠದ ವತಿಯಿಂದ ಕಲ್ಯಾಣ ಮಂಟಪ ಸೇರಿದಂತೆ ವಿವಿಧ ಸ್ಥಳಗಳಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲಾಗಿದ್ದರೂ ಅದು ಕೂಡ ಸಾಕಾಗದೆ ಭಕ್ತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೆಲವರು ಮಠದ ಪ್ರಾಂಗಣದಲ್ಲೇ ಮಲಗುತ್ತಿರುವ ದೃಶ್ಯಗಳು ಕಂಡುಬಂದಿವೆ.
ಇದೇ ವೇಳೆ ಖಾಸಗಿ ವಸತಿ ಗೃಹ ಮಾಲೀಕರು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಆರೋಪವೂ ಕೇಳಿಬಂದಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ.
ಮಳೆಗಾಲದ ನಡುವೆಯೂ ಮಂತ್ರಾಲಯಕ್ಕೆ ಭಕ್ತರ ಆಗಮನ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ವಸತಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.



