ಬೆಂಗಳೂರು: ರಾಜ್ಯಪಾಲರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂದು ನನಗೆ ಆಶ್ಚರ್ಯ ಆಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಪಾಲರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂದು ನನಗೆ ಆಶ್ಚರ್ಯ ಆಗುತ್ತಿದೆ.
ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದೇವೆ. ಕೇಂದ್ರ ಸರ್ಕಾರ ಈಗ ರಾಜ್ಯಪಾಲರನ್ನು ಉಪಯೋಗಿಸಿಕೊಂಡು ಇಲ್ಲಿ ರಾಜಕೀಯ ಮಾಡಲು ಶುರು ಮಾಡಿದ್ದಾರೆ. ಈ ರೀತಿ ರಾಜ್ಯಪಾಲರು ಪತ್ರ ಬರೆಯುತ್ತಾರಾ ಎಂದು ವಿರೋಧ ಪಕ್ಷದ ನಾಯಕರು ಮಾಹಿತಿ ಕೇಳಲಿ. ಆದರೆ ರಾಜ್ಯಪಾಲರು ಕೇಳುವುದು ಸರಿಯಲ್ಲ ಎಂದು ಹೇಳಿದರು.



