HomeKarnataka Newsಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು: ಡಿಕೆಶಿಗೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು: ಡಿಕೆಶಿಗೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

For Dai;y Updates Join Our whatsapp Group

Spread the love

ಬೆಂಗಳೂರು: ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಎಂದು ಡಿಕೆಶಿಗೆ ಜೆಡಿಎಸ್ಯುವನಾಯಕ ನಿಖಿಲ್ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.  ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಡಿ.ಕೆ ಶಿವಕುಮಾರ್ಅವರೇ, 2023 ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ.

ನಿಮ್ಮನ್ನ ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಿಲ್ಲ. ಪಾಪ.. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಶಾಸಕ ಶಿವಲಿಂಗೇಗೌಡರನ್ನು ಸಹ ಮಂತ್ರಿ ಮಾಡಲಿಲ್ಲ, ಗುಬ್ಬಿ ಶಾಸಕರನ್ನು ಮಂತ್ರಿ ಮಾಡುವುದು ಇರಲಿ, ಅವರ ಶ್ರೀಮತಿ ಅವರನ್ನ ಡೇರಿ ಅಧ್ಯಕ್ಷರಾಗಿ ಮಾಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಂತೂ ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟುಕೋಟುಗಳು ಮೂಲೆಗೆ ಬಿದ್ದು ಧೂಳು ತಿನ್ನುತ್ತಿವೆ

ಇನ್ನು ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ ಮುಡಾ ಟ್ರ್ಯಾಪ್! ಸಚಿವರು, ದಲಿತ ಸಮಾಜದ ಹಿರಿಯರಾದ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್!! ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇರುವ ಉಳಿಕೆ ಕಾಂಗ್ರೆಸ್ ನಾಯಕರನ್ನು ದೇವರೇ ರಕ್ಷಣೆ ಮಾಡಬೇಕು.

ರಾಜಕೀಯವಾಗಿ ಗುದ್ದಾಡೋಣ. ಹೋರಾಟ ಮಾಡೋಣ. ಆರೋಗ್ಯಕರವಾಗಿ ಆಲೋಚನೆ ಮಾಡಿ. ಮುತ್ಸದ್ಧಿಯಾಗಿ ಬೆಳೆಯುವ ಕನಿಷ್ಠ ಪ್ರಯತ್ನವನ್ನಾದರೂ ಮಾಡಿ. ರಾಷ್ಟ್ರ ಕಂಡ ಅಪರೂಪದ ನಾಯಕರಾದ ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಅಂತ ಎಚ್ಚರಿಕೆ ಕೊಟ್ಟಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!