HomeGadag Newsಫೆ.3ಕ್ಕೆ ಹೃದ್ರೋಗ ಚಿಕಿತ್ಸಾ ಘಟಕದ ಉದ್ಘಾಟನೆ

ಫೆ.3ಕ್ಕೆ ಹೃದ್ರೋಗ ಚಿಕಿತ್ಸಾ ಘಟಕದ ಉದ್ಘಾಟನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವೈದ್ಯಕೀಯ ಶಿಕ್ಷಣ ಇಲಾಖೆ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ನೂತನ ಕ್ಯಾಥಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕದ ಉದ್ಘಾಟನಾ ಸಮಾರಂಭವು ಫೆ.3ರಂದು ಬೆಳಿಗ್ಗೆ 10 ಗಂಟೆಗೆ ಮಲ್ಲಸಮುದ್ರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಆವರಣದಲ್ಲಿ ಜರುಗಲಿದೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ, ಅಸುಂಡಿ ಗ್ರಾ.ಪಂ ಅಧ್ಯಕ್ಷರಾದ ಅಲ್ತಾಫ್ ಕಾಗದಗಾರ ಆಗಮಿಸುವರು.

ಜಿಮ್ಸ್ ನಿರ್ದೇಶಕರಾದ ಡಾ. ಬಸವರಾಜ ಬೊಮ್ಮನಹಳ್ಳಿ, ವೈದ್ಯಕೀಯ ಅಧೀಕ್ಷಕರಾದ ಡಾ.ರೇಖಾ ಎಸ್.ಸೋನಾವನೆ, ಪ್ರಾಂಶುಪಾಲರಾದ ಡಾ. ರಾಜು ಜಿ.ಎಮ್, ಆರ್ಥಿಕ ಸಲಹೆಗಾರರಾದ ಪ್ರಶಾಂತ ಜೆ.ಸಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಬಿ.ಸಿ. ಕರಿಗೌಡರ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ವಿಶೇಷ ಆಹ್ವಾನಿತರಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಸಿನ್, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಬಿ.ಎಲ್. ಸುಜಾತಾ ರಾಠೋಡ ಆಗಮಿಸುವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!