HomeSports NewsIND vs ENG: ಮೊದಲ ಪಂದ್ಯದಲ್ಲೇ ಶತಕ: ದಾಖಲೆ ಬರೆದ ಯಶಸ್ವಿ ಜೈಸ್ವಾಲ್!

IND vs ENG: ಮೊದಲ ಪಂದ್ಯದಲ್ಲೇ ಶತಕ: ದಾಖಲೆ ಬರೆದ ಯಶಸ್ವಿ ಜೈಸ್ವಾಲ್!

For Dai;y Updates Join Our whatsapp Group

Spread the love

ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಹೆಡಿಂಗ್ಲೆ ಟೆಸ್ಟ್ ಪಂದ್ಯದ ಮೊದಲ ದಿನದಂದು ಬಲವಾದ ಹಿಡಿತ ಸಾಧಿಸಿದೆ. ಟಾಸ್ ಸೋತ ನಂತರ, ಮೊದಲು ಬ್ಯಾಟಿಂಗ್ ಮಾಡಲು ಇಳಿದ ಭಾರತ ತಂಡವು ದಿನದ ಅಂತ್ಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿದೆ.

ಮೊದಲ ದಿನದ ಸ್ಟಂಪ್ಗಳ ಹೊತ್ತಿಗೆ, ಶುಭ್ಮನ್ ಗಿಲ್ 127 ರನ್ ಮತ್ತು ರಿಷಭ್ ಪಂತ್ 65 ರನ್ ಗಳಿಸಿ ಅಜೇಯರಾಗಿ ಉಳಿದರುಇನ್ನೂ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ಪಂದ್ಯದಲ್ಲಿ 159 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 1 ಸಿಕ್ಸ್ ಹಾಗೂ 16 ಫೋರ್ಗಳೊಂದಿಗೆ ಒಟ್ಟು 101 ರನ್ ಬಾರಿಸಿದ್ದಾರೆ. ಮೂಲಕ ಹೆಡಿಂಗ್ಲೆ ಮೈದಾನದಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ದಾಖಲೆಯಿದ್ದದ್ದು ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಫಾರೂಖ್ ಇಂಜಿನಿಯರ್ ಹೆಸರಿನಲ್ಲಿ. 1967 ರಲ್ಲಿ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ್ದ ಫಾರೂಖ್ ಇಂಜಿನಿಯರ್ 87 ರನ್ ಬಾರಿಸಿದ್ದರು. ಇದೀಗ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

ಅಷ್ಟೇ ಅಲ್ಲದೆ ಹೆಡಿಂಗ್ಲೆ ಮೈದಾನದಲ್ಲಿ ಮೂರಂಕಿ ರನ್ಗಳಿಸಿದ ಭಾರತದ ಮೊದಲ ಆರಂಭಿಕ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ಮೈದಾನದಲ್ಲಿ ಸೆಂಚುರಿ ಬಾರಿಸಿದ ಟೀಮ್ ಇಂಡಿಯಾ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!