HomeGadag Newsಕಾಂಗ್ರೆಸ್ ಸರ್ಕಾರದಿಂದ ಜನತೆಗೆ ಅನ್ಯಾಯ

ಕಾಂಗ್ರೆಸ್ ಸರ್ಕಾರದಿಂದ ಜನತೆಗೆ ಅನ್ಯಾಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಣಕಾಸು ಖಾತೆಯ ಜವಾಬ್ದಾರಿ ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ರಾಜ್ಯದ 2025-26ರ ಸಾಲಿನ ಬಜೆಟ್ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿದ್ದು, ಬಿಜೆಪಿ ಈ ಬಜೆಟ್‌ನ್ನು ಖಂಡಿಸುತ್ತದೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ಜನವಿರೋಧಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಗಾಂಧಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ, ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಅವರು ಮಾತನಾಡಿ, ಇದು ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ. ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ ಎಂದು ಆಕ್ಷೇಪಿಸಿದರು.

ಸರ್ಕಾರಿ ಶಾಲೆಗಳ ಕಟ್ಟಡಗಳ ವಿಸ್ತರಣೆ ಹಾಗು ನವೀಕರಣಕ್ಕೆ ಬಜೆಟ್‌ನಲ್ಲಿ ಯಾವುದೇ ಹಣ ನೀಡದೇ, ಕೇವಲ 5 ಸಾವಿರ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯದತ್ತ ದೃಷ್ಟಿ ಹರಿಸದೆ ಕೈ ತೊಳೆದುಕೊಳ್ಳಲಾಗಿದೆ. 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಖಂಡನಾರ್ಹ ಎಂದು ತಿಳಿಸಿದರು.

ಜಗನ್ನಾಥಸಾ ಭಾಂಡಗೆ, ರಾಘವೇಂದ್ರ ಯಳವತ್ತಿ, ಉಷಾ ದಾಸರ, ಚಂದ್ರು ತಡಸದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮುಂತಾದ ಮುಖಂಡರು ಸಂದರ್ಭೊಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ವಿಜಯಕುಮಾರ ಗಡ್ಡಿ, ಭದ್ರೇಶ ಕುಸ್ಲಾಪೂರ, ಅಶೋಕ ಸಂಕಣ್ಣವರ, ಬೂದಪ್ಪ ಹಳ್ಳಿ, ಅನಿಲ ಅಬ್ಬಿಗೇರಿ, ಭೀಮಸಿಂಗ ರಾಠೋಡ, ವಿನಾಯಕ ಮಾನ್ವಿ, ನಾಗರಾಜ ಕುಲಕರ್ಣಿ, ಬಿ.ಎಸ್. ಚಿಂಚಲಿ, ಸುಧಿರ ಕಾಟಿಗರ, ಸಂತೋಷ ಅಕ್ಕಿ, ರಮೇಶ ಸಜ್ಜಗಾರ, ಶಿವು ಹಿರೇಮನಿಪಾಟೀಲ, ನಾಗರಾಜ ತಳವಾರ, ನವೀನ ಕೊಟೆಕಲ್, ಮಹಾದೇವಪ್ಪ ಹಡಪದ, ಮುತ್ತಪ್ಪ ಮೂಲಿಮನಿ, ಅಪ್ಪಣ್ಣ ಟೆಂಗಿನಕಾಯಿ, ಲಕ್ಷ್ಮಣ ದೊಡ್ಮನಿ, ಮುತ್ತಣ್ಣ ಮುಶಿಗೇರಿ, ಶಂಕರ ಕಾಕಿ, ರವಿ ವಗ್ಗನವರ, ಬಸವರಾಜ ಚವ್ಹಾಣ, ಅವಿನಾಶ ಹೊನಗುಡಿ, ಅಪ್ಪು ನಸಸ್ತೆಮಠ, ಅಪ್ಪಣ್ಣ ಟೆಂಗಿನಕಾಯಿ, ಪಂಚಾಕ್ಷರಿ ಹರ್ಲಾಪೂರಮಠ, ಛಗನ ರಾಜಪುರೋಹಿತ, ಸಿದ್ರಾಮೇಶ ಹಿರೇಮಠ, ಮಾಂತೇಶ ಕಾತರಗಿ, ವಿಜಯಲಕ್ಷ್ಮಿ ದಿಂಡೂರ,ಲಕ್ಷ್ಮಿ ಕಾಕಿ, ಕಮಲಾಕ್ಷಿ ಗೊಂದಿ, ಮಂಜುನಾಥ ಶಾಂತಗೇರಿ, ರಮೇಶ ವಕ್ಕಾರ, ಬಸವರಾಜ ನರೆಗಲ್, ವಿನಾಯಕ ಹೊರಕೇರಿ, ಧರ್ಮರಾಜ ಕೊಂಚಿಗೇರಿ, ಕಾಳು ತೊಟದ, ಮಹೇಶ ದಾಸರ, ಕಿರಣ ಕಾಲಾಲ, ಆನಂದ ಗೌಳಿ, ಕಿರಣ ದಾಟನಾಳ, ಪ್ರಕಾಶ ಕೊತಂಬರಿ, ನಿಂಗಪ್ಪ ಬೂಶಿಯವರ, ಮಾಂತೇಶ ಕಾತರಗಿ, ವಿನೋದ ಹಂಸನೂರ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

ಕುಲಕಸುಬು ಆಧಾರಿತ ಸಮುದಾಯಗಳನ್ನು ಉತ್ತೇಜಿಸಲು ಯಾವುದೇ ಕಾರ್ಯಕ್ರಮಗಳನ್ನು ಕೊಡದೇ ಕೇವಲ ಅಧಿಕಾರಕ್ಕೆ ಬರಲು ಮಾತ್ರ ದಲಿತ, ಹಿಂದುಳಿದವರ ಜಪ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಬಿವೃದ್ಧಿಯಲ್ಲಿ ಹಿಂದುಳಿದ ಸಮುದಾಯಗಳ ಕಷ್ಟದ ತಾಪವನ್ನು ಕಡಿಮೆ ಮಾಡುವ ಯಾವುದೇ ಯೋಜನೆ ಪ್ರಕಟಿಸದೇ ಒಬಿಸಿ ಸಮುದಾಯಗಳ ಹಿತಾಸಕ್ತಿಯನ್ನು ಪೂರ್ಣ ಕಡೆಗಣಿಸಲಾಗಿದೆ. ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. ಕಳೆದ ಬಜೆಟ್‌ನಲ್ಲಿ ಘೋಷಣೆಯಾಗಿದ್ದ ಎಲ್ಲವೂ ಘೋಷಣೆಯಾಗಿಯೇ ಉಳಿದಿದೆ. ಈ ಬಜೆಟ್‌ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎಂದು ಪ್ರತಿಭಟನಾಕಾರರು ಆರೋಪಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!