Homeculture`ದೇವನೊಬ್ಬ-ನಾಮ ಹಲವು'

`ದೇವನೊಬ್ಬ-ನಾಮ ಹಲವು’

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಸೂರಣಗಿ ಗ್ರಾಮದ ಮುಸ್ಲಿಂ ಧರ್ಮದ ಮುಸ್ತಾಪ್ ಮಾಬುಸಾಬ್ ಕೋಲ್ಕಾರ ಗಣೇಶ ಚತುರ್ಥಿ ದಿನ ಹಿಂದೂ ಸಂಪ್ರದಾಯದಂತೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಸಾರಿದ್ದಾರೆ. ಮುಸ್ತಾಪ್ ಮತ್ತು ಯಾಸ್ಮಿನಾಬಾನು ದಂಪತಿಗಳಿಗೆ ಐದು ಜನ ಮಕ್ಕಳು. ಅವರ ಕೊನೆಯ ಮಗ 3 ವರ್ಷದ ಹಜರತಲಿಗೆ ಗಣೇಶನೆಂದರೆ ಬಹಳ ಪ್ರೀತಿ. ದೇವರು-ಧರ್ಮ, ಜಾತಿ ಹೆಸರಿನಲ್ಲಿ ದೇಶದಲ್ಲಿ ನಡೆಯುತ್ತಿರುವ ಅರಾಜಕತೆ, ಧರ್ಮಯುದ್ಧದ ಬಗ್ಗೆ ಏನೂ ಅರಿಯದ ಪುಟಾಣಿ ತಾನು ಗಣೇಶನನ್ನು ಮನೆಗೆ ತೆಗೆದುಕೊಂಡು ಹೋಗಬೇಕು, ಎಲ್ಲರಂತೆ ಪೂಜಿಸಬೇಕು, ಪಟಾಕಿ ಹೊಡೆಯಬೇಕು, ಕುಣಿದು ಕುಪ್ಪಳಿಸಬೇಕೆಂಬ ಹಂಬಲ. ಈ ಬಗ್ಗೆ ತಂದೆ-ತಾಯಿ ಹತ್ತಿರ ಕೇಳಿ, ಹಠ ಮಾಡಿದ್ದರೂ ತಂದೆ ಹೇಗೂ ಸಮಾಧಾನ ಮಾಡಿ ಮಾತು ಮರೆಸಿದ್ದರು.

ಆದರೆ ಗಣೇಶ ಚತುರ್ಥಿ ದಿನ ಎಲ್ಲರೂ ಮನೆಗೆ ಗಣೇಶನ ಮೂರ್ತಿ ತರುವುದನ್ನು ಗಮನಿಸಿದ ಹಜರತಲಿ, ತನ್ನ ಅಣ್ಣನೊಂದಿಗೆ ಗಣೇಶಮೂರ್ತಿ ಮಾರಾಟ ಮಾಡುವಲ್ಲಿಗೆ ಹೋಗಿ ಗಣೇಶನ ಮೂರ್ತಿಯನ್ನು ಮನೆಗೆ ತಂದಿದ್ದಾರೆ. ಇದನ್ನು ಕಂಡ ತಂದೆ-ತಾಯಿ ಒಂದು ಕ್ಷಣ ಮೌನವಾದರು. ಗ್ರಾಮೀಣ ಭಾಗದ ಪರಿಸರ, ಜಾತಿ-ಧರ್ಮದ ಹಂಗಿಲ್ಲದೇ ಎಲ್ಲರೊಂದಿಗೆ ಸಹೋದರತ್ವ ಭಾವನೆಯಿಂದ ಬದುಕುವುದನ್ನು ಅರಿತ ತಂದೆ-ತಾಯಿಗಳು ಮಗನ ಬಗ್ಗೆ ಒಂದಿಷ್ಟೂ ಬೇಸರ ಮಾಡಿಕೊಳ್ಳದೇ ಗಣೇಶನ ಮೂರ್ತಿಯನ್ನು ಶೃದ್ಧಾ-ಭಕ್ತಿಯಿಂದ ಬರಮಾಡಿಕೊಂಡು ಮನೆಯಲ್ಲಿ ಪ್ರತಿಷ್ಠಾಪಿಸಿ ಹಿಂದೂ ಸಂಪ್ರದಾಯದಂತೆ ಪೂಜಿಸಿರುವುದು `ದೇವನೊಬ್ಬ-ನಾಮ ಹಲವು’ ಎಂಬ ಭಾವೈಕ್ಯತೆಯನ್ನು ಸಾರಿದೆ.

Installation of Ganap at the house of a Muslim relative

ಮಗ ಹಜರತಲಿಗೆ ಗಣೇಶನ ಮೂರ್ತಿಯೆಂದರೆ ತುಂಬಾ ಇಷ್ಟ. ಅಂಗನವಾಡಿಯಲ್ಲೂ ರಾಷ್ಟ್ರೀಯ ಹಬ್ಬದ ದಿನ ಹಿಂದೂ ದೇವರ ವೇಷಭೂಷಣ ತೊಡಿಸಿದ್ದೆವು. ಮಕ್ಕಳು ದೇವರ ಸಮಾನ ಅಂತಾರೆ. ದೇವರೇ ಮನೆಗೆ ಬಂದಂತಾಗಿದ್ದು ಶೃದ್ಧೆ, ಭಕ್ತಿ, ಸಂಭ್ರಮದಿಂದ ಗಣೇಶನ ಮೂರ್ತಿಯನ್ನು ಪೂಜಿಸುತ್ತೇವೆ. ಪ್ರತಿವರ್ಷವೂ ನಮ್ಮ ಮನೆಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸುತ್ತೇವೆ.
– ಮುಸ್ತಪಾ-ಯಾಸ್ಮಿನಾಬಾನು.
ಹಜರತಲಿ ತಂದೆ-ತಾಯಿ.

ದೇವರ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕದಡುವವರ ನಡುವೆ ಮುಸ್ಲಿಂ ಧರ್ಮದವರಾದರೂ ತಮ್ಮ ಮಗನ ಆಸೆಯಂತೆ ಮನೆಯಲ್ಲಿ ಗಣೇಶನ ಮೂರ್ತಿಯನ್ನಿಟ್ಟು ಪೂಜಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಈಗಲೂ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಎಲ್ಲ ಜಾತಿ, ಧರ್ಮದವರು ಪರಸ್ಪರ ಸ್ನೇಹ, ಸಹೋದರತ್ವದೊಂದಿಗೆ ಆಚರಿಸುತ್ತಾರೆ.
– ಈರಣ್ಣ ಶೀರನಳ್ಳಿ.
ಸೂರಣಗಿ ಗ್ರಾಮಸ್ಥರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!