HomeSports Newsಇಂದು IPL ಹೈವೋಲ್ಟೇಜ್ ಪಂದ್ಯ: LSG vs RR ನಡುವೆ ಕದನ! ಯಾರು ಮೇಲುಗೈ?

ಇಂದು IPL ಹೈವೋಲ್ಟೇಜ್ ಪಂದ್ಯ: LSG vs RR ನಡುವೆ ಕದನ! ಯಾರು ಮೇಲುಗೈ?

For Dai;y Updates Join Our whatsapp Group

Spread the love

ಹೈದರಾಬಾದ್: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಸಂಜೆ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಜಸ್ಥಾನ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿವೆ.

ರಾಜಸ್ಥಾನ ರಾಯಲ್ಸ್ ತಂಡ ಈ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದು, ಐದನೇ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲು ಉತ್ಸುಕವಾಗಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡದೆ ಹಿನ್ನಡೆಯಲ್ಲಿದ್ದು, ಆರು ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳೊಂದಿಗೆ ಏಳನೇ ಸ್ಥಾನದಲ್ಲಿದೆ.

LSG ಪರ ಐಡೆನ್ ಮಾರ್ಕ್ರಾಮ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದು, ಆರು ಇನ್ನಿಂಗ್ಸ್‌ಗಳಲ್ಲಿ 162 ರನ್ ಗಳಿಸಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಪ್ರಿನ್ಸ್ ಯಾದವ್ 11 ವಿಕೆಟ್ ಪಡೆದು ಗಮನಸೆಳೆದಿದ್ದಾರೆ.

RR ಪರ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಅದ್ಭುತ ಫಾರ್ಮ್‌ನಲ್ಲಿ ಇದ್ದು, ಕ್ರಮವಾಗಿ 223 ಮತ್ತು 246 ರನ್ ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ ರವಿ ಬಿಷ್ಣೋಯ್ 10 ವಿಕೆಟ್ ಪಡೆದು ಪ್ರಮುಖ ಪಾತ್ರವಹಿಸಿದ್ದಾರೆ.

ಎರಡೂ ತಂಡಗಳ ನಡುವಿನ ಹಿಂದಿನ ಮುಖಾಮುಖಿಗಳಲ್ಲಿ RR ಮೇಲುಗೈ ಸಾಧಿಸಿದೆ. ಆರು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳಲ್ಲಿ RR ಗೆಲುವು ಸಾಧಿಸಿದ್ದರೆ, LSG ಕೇವಲ ಎರಡು ಪಂದ್ಯಗಳಲ್ಲಿ ಜಯ ಗಳಿಸಿದೆ. ಕಳೆದ ಸೀಸನ್‌ನಲ್ಲಿ ನಡೆದ ಪಂದ್ಯದಲ್ಲಿ LSG ಎರಡು ರನ್‌ಗಳ ಅಂತರದಿಂದ ಗೆದ್ದಿತ್ತು. ಹೀಗಾಗಿ, ಇಂದಿನ ಪಂದ್ಯದಲ್ಲಿ ಎರಡೂ ತಂಡಗಳ ನಡುವೆ ಕಠಿಣ ಪೈಪೋಟಿ ನಿರೀಕ್ಷಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!