ಶಿವಮೊಗ್ಗ:- ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡ ಸಧ್ಯ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಆದ್ರೆ ಈ ಯುದ್ಧದ ಎಫೆಕ್ಟ್ ಭಾರತಕ್ಕೂ ತಟ್ಟಿದೆ.
ದೇಶದಲ್ಲಿ ಸಿಲಿಂಡರ್ ಅಭಾವ ಸೃಷ್ಟಿಯಾಗಿದ್ದು, ಹೋಟೆಲ್‌ಗಳು ಬಾಗಿಲು ಮುಚ್ಚಿವೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ತೈಲ ಮತ್ತು ಅನಿಲ ಪೂರೈಕೆ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿವೆ. ದೇಶದ ವಿವಿಧ ಭಾಗಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಭೀತಿ ಶುರುವಾಗಿದೆ.
ಎಸ್, ಶಿವಮೊಗ್ಗದ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಹರಡಿದ್ದು, ಹೀಗಾಗಿ ಪೆಟ್ರೋಲ್ – ಡೀಸೆಲ್ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ 3 ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಖಾಲಿ ಹಿನ್ನೆಲೆ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಹರಡಿತ್ತು. ಈ ಹಿನ್ನೆಲೆ ಇಂದನ ಲಭ್ಯವಿದ್ದ ಹೆಚ್‌ಪಿ ಪೆಟ್ರೋಲ್ ಬಂಕ್‌ಗೆ ಜನರು ಮುಗಿಬಿದ್ದಿದ್ದಾರೆ.
ವಾಹನದ ಜೊತೆಗೆ ಖಾಲಿ ಬಾಟಲ್‌ಗಳನ್ನ ಸಹ ತಂದ ಜನರು ಕ್ಯೂನಲ್ಲಿ ನಿಂತು ವಾಹನ ಹಾಗೂ ಕ್ಯಾನ್‌ಗಳಿಗೆ ಇಂಧನ ಭರ್ತಿ ಮಾಡಿಕೊಂಡಿದ್ದಾರೆ. ವದಂತಿ ಹರಡಿದ ಬೆನ್ನಲ್ಲೇ ಇಂಧನ ಕೊರತೆಯಿಲ್ಲ, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಬಂಕ್ ಮಾಲೀಕರು ಸ್ಪಷ್ಟನೆ ನೀಡಿದ್ದಾರೆ.



