HomeLife Styleಶ್ರೀಲಂಕಾ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್‌ಗೆ ಸಚಿನ್ ದಾಖಲೆ ಮೇಲೆ ಕಣ್ಣು!

ಶ್ರೀಲಂಕಾ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್‌ಗೆ ಸಚಿನ್ ದಾಖಲೆ ಮೇಲೆ ಕಣ್ಣು!

For Dai;y Updates Join Our whatsapp Group

ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮಹತ್ವದ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಜೈಸ್ವಾಲ್, ಅಭ್ಯಾಸ ಪಂದ್ಯದಲ್ಲೂ ಅರ್ಧಶತಕ ಸಿಡಿಸುವ ಮೂಲಕ ಉತ್ತಮ ಲಯದಲ್ಲಿರುವುದನ್ನು ತೋರಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಶತಕ ಬಾರಿಸಿದರೆ, 24ನೇ ವಯಸ್ಸಿಗೂ ಮುನ್ನ ಐದು ವಿಭಿನ್ನ ದೇಶಗಳಲ್ಲಿ ಟೆಸ್ಟ್ ಶತಕ ಸಿಡಿಸಿದ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಈ ವಿಶೇಷ ದಾಖಲೆ ಸದ್ಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ.

ಜೈಸ್ವಾಲ್ ಈಗಾಗಲೇ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಮತ್ತು ವೆಸ್ಟ್ ಇಂಡೀಸ್ ನೆಲದಲ್ಲಿ ಟೆಸ್ಟ್ ಶತಕ ಬಾರಿಸಿದ್ದಾರೆ. ಇದೀಗ ಶ್ರೀಲಂಕಾದಲ್ಲೂ ಶತಕ ಸಿಡಿಸಿದರೆ, ಸಚಿನ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ಏಷ್ಯಾದ ಮೈದಾನಗಳಲ್ಲೂ ಜೈಸ್ವಾಲ್ ಅವರ ಬ್ಯಾಟಿಂಗ್ ದಾಖಲೆ ಗಮನಾರ್ಹವಾಗಿದೆ. ಏಷ್ಯಾದಲ್ಲಿ ಇದುವರೆಗೆ 15 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 1,417 ರನ್ ಗಳಿಸಿದ್ದಾರೆ. 54.5ರ ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಜೈಸ್ವಾಲ್, ನಾಲ್ಕು ಶತಕ ಹಾಗೂ ಎಂಟು ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ ಅಜೇಯ 214 ರನ್.

ಆದರೆ ಶ್ರೀಲಂಕಾ ನೆಲದಲ್ಲಿ ಜೈಸ್ವಾಲ್‌ಗೆ ಸವಾಲು ಎದುರಾಗಲಿದೆ. ಏಕೆಂದರೆ ಅವರು ಇದೇ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಅಲ್ಲದೆ, ಶ್ರೀಲಂಕಾ ವಿರುದ್ಧವೂ ಇದು ಅವರ ಮೊದಲ ಟೆಸ್ಟ್ ಸರಣಿಯಾಗಿದೆ. ಹೀಗಾಗಿ ಸಿಂಹಳೀಯರ ನಾಡಿನಲ್ಲಿ ಜೈಸ್ವಾಲ್ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಇದರ ಜೊತೆಗೆ ಮತ್ತೊಂದು ಮೈಲಿಗಲ್ಲು ಸಾಧಿಸುವ ಅವಕಾಶವೂ ಜೈಸ್ವಾಲ್ ಮುಂದಿದೆ. ಈ ಟೆಸ್ಟ್ ಸರಣಿಯಲ್ಲಿ ಐದು ಸಿಕ್ಸರ್‌ಗಳನ್ನು ಬಾರಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 50 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ಮೂರನೇ ಭಾರತೀಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಪಟ್ಟಿಯಲ್ಲಿ ಈಗಾಗಲೇ ರೋಹಿತ್ ಶರ್ಮಾ ಮತ್ತು ವೀರೇಂದ್ರ ಸೆಹ್ವಾಗ್ ಸ್ಥಾನ ಪಡೆದಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img