ಶಿವಮೊಗ್ಗ:- ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಕಡವೆ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಜರುಗಿದೆ.
ಮಂಜುನಾಥ್ ಬಂಧಿತ ಆರೋಪಿ. ಐವರು ದುಷ್ಕರ್ಮಿಗಳು ಸೇರಿ ಭದ್ರಾವತಿ ತಾಲೂಕಿನ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದಾರೆ.
ಈ ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ನಡೆಸಿದ ದಾಳಿ ವೇಳೆ ಉಳಿದ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಉಳಿದ ಆರೋಪಿಗಳ ಬಂಧನಕ್ಕೆ ಅಧಿಕಾರಿಗಳು ಬಲೆ ಬೀಸಿದ್ದಾರೆ.



