HomeKarnataka Newsರಾಯಚೂರಿನಲ್ಲಿ ಕಾರಹುಣ್ಣಿಮೆ ಸಂಭ್ರಮ: ಮುಂಗಾರು ಹಬ್ಬದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನ

ರಾಯಚೂರಿನಲ್ಲಿ ಕಾರಹುಣ್ಣಿಮೆ ಸಂಭ್ರಮ: ಮುಂಗಾರು ಹಬ್ಬದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನ

For Dai;y Updates Join Our whatsapp Group

ರಾಯಚೂರು: ಕಾರಹುಣ್ಣಿಮೆ ಹಿನ್ನೆಲೆ ರಾಯಚೂರು ಜಿಲ್ಲೆಯ ಹಲವೆಡೆ ಮುಂಗಾರು ಸಾಂಸ್ಕೃತಿಕ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಜಿಲ್ಲೆಯ ರೈತರು ಸಂಪ್ರದಾಯಬದ್ಧವಾಗಿ ಹಬ್ಬದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ರಾಯಚೂರು ತಾಲೂಕಿನ ಆಶಾಪೂರ ಗ್ರಾಮದಲ್ಲಿ ಎತ್ತುಗಳಿಗೆ ಭಾರದ ಕಲ್ಲು ಎಳೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಂಗಳವಾರಪೇಟೆ ಹಿರೇಮಠದ ಪೀಠಾಧಿಪತಿ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮಿ ಅವರು ಮುಂಗಾರು ಹಬ್ಬಕ್ಕೆ ಚಾಲನೆ ನೀಡಿದರು.

ಈ ಸ್ಪರ್ಧೆಯಲ್ಲಿ ಹೊರಜಿಲ್ಲೆಗಳಿಂದ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದಿದ್ದ 15 ಜೋಡಿ ಎತ್ತುಗಳು ಭಾಗವಹಿಸಿ, ಸುಮಾರು ಒಂದು ಟನ್ ತೂಕದ ಕಲ್ಲನ್ನು ಎಳೆದು ತಮ್ಮ ಶಕ್ತಿ ಪ್ರದರ್ಶಿಸಿದವು.

ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಮುಂಗಾರು ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಬಾರಿ ಅದನ್ನು ಇನ್ನಷ್ಟು ವಿಜೃಂಭಣೆಯಿಂದ ನಡೆಸಲಾಯಿತು. ಸ್ಪರ್ಧೆಯಲ್ಲಿ ಜಯಗಳಿಸಿದ ಎತ್ತುಗಳ ಮಾಲೀಕರಿಗೆ ಬಹುಮಾನ ಹಾಗೂ ಸನ್ಮಾನ ಮಾಡಲಾಯಿತು.

ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ರೈತರು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮ ವ್ಯಕ್ತಪಡಿಸಿದರು. ಜೊತೆಗೆ ಮುಂದಿನ ವರ್ಷವೂ ಉತ್ತಮ ಮುಂಗಾರು ಆಗಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img