HomeIndia Newsಕೇಂದ್ರಕ್ಕೆ ಸೆಡ್ಡು ಹೊಡೆದ ಕರ್ನಾಟಕ ಸರ್ಕಾರ; ‘ವಂದೇ ಮಾತರಂ’ ಗಾಯನದ ಬಗ್ಗೆ ಮಹತ್ವದ ಆದೇಶ

ಕೇಂದ್ರಕ್ಕೆ ಸೆಡ್ಡು ಹೊಡೆದ ಕರ್ನಾಟಕ ಸರ್ಕಾರ; ‘ವಂದೇ ಮಾತರಂ’ ಗಾಯನದ ಬಗ್ಗೆ ಮಹತ್ವದ ಆದೇಶ

For Dai;y Updates Join Our whatsapp Group

ಬೆಂಗಳೂರು: ‘ವಂದೇ ಮಾತರಂ’ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಆರು ಚರಣಗಳ ಬದಲು ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಿದೆ.

1937ರ ನಿರ್ಣಯದಂತೆ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಕಾಂಗ್ರೆಸ್‌ನ ಹಿರಿಯ ನಾಯಕರ ಅಭಿಪ್ರಾಯಗಳ ಬೆನ್ನಲ್ಲೇ ರಾಜ್ಯ ಸರ್ಕಾರದ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ವಂದೇ ಮಾತರಂ ಗೀತೆಯ ಎಲ್ಲಾ ಆರು ಪ್ಯಾರಾಗಳನ್ನು ಹಾಡುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ಜನರಲ್ಲಿ ರಾಷ್ಟ್ರೀಯತೆ, ಏಕತೆ ಹಾಗೂ ದೇಶಭಕ್ತಿಯ ಭಾವನೆ ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆ ಪ್ರಮುಖ ಪಾತ್ರ ವಹಿಸಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂನ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಲ್ಲಿ ಗೀತೆಯ ವಾದನ ಹಾಗೂ ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ವಿವರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂ ಗೀತೆಯ ವಾದನ ಅಥವಾ ಗಾಯನದಲ್ಲಿ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದ ತೀರ್ಮಾನದಂತೆ, ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಉಳಿದ ಎಲ್ಲಾ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಅವರು ಹೊರಡಿಸಿರುವ ಆದೇಶದಲ್ಲಿ ಈ ಸೂಚನೆ ನೀಡಲಾಗಿದೆ.

ಈ ಮೂಲಕ ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗಾಯನಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಶಿಷ್ಟಾಚಾರವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img