HomePolitics Newsಕರ್ನಾಟಕ ರಾಜ್ಯ ವ್ಯಾಪಾರ -ವ್ಯವಹಾರಗಳಿಗೆ ಮುಕ್ತವಾಗಿದೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ವ್ಯಾಪಾರ -ವ್ಯವಹಾರಗಳಿಗೆ ಮುಕ್ತವಾಗಿದೆ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕ ರಾಜ್ಯ ವ್ಯಾಪಾರ -ವ್ಯವಹಾರಗಳಿಗೆ ಮುಕ್ತವಾಗಿದೆ, ಅಲ್ಲದೆ ಅಪಾರ ಅವಕಾಶಗಳನ್ನು ಒದಗಿಸುವ ರಾಜ್ಯವಾಗಿದ್ದು, ನಮ್ಮ ಜನ ಹಾಗೂ ಜಾಗತಿಕ ಸಮುದಾಯದ ಭವಿಷ್ಯಕ್ಕಾಗಿ ಇವುಗಳನ್ನು ಬಳಸಿಕೊಳ್ಳಲು ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಯು.ಎಸ್. ಇಂಡಿಯಾ ಬಿಸಿನೆಸ್ ಕೌನ್ಸಿಲ್ ನ ಪ್ರತಿನಿಧಿಗಳೊಂದಿಗೆ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು. ನಂತರ ಮಾತನಾಡಿದ ಅವರು,

ಇಂದು ನಾವು ನಡೆಸಿದ ಚರ್ಚೆಯು ಕರ್ನಾಟಕ ಮತ್ತು ಯುನೈಟೆಡ್ ಸ್ಟೇಟ್ಸ್ ಮಧ್ಯೆ ಇರುವ ಸದೃಢ ಮತ್ತು ಕ್ರಿಯಾತ್ಮಕ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಈ ದುಂಡುಮೇಜಿನ ಸಭೆಯಲ್ಲಿ ನಾವು ಕೇವಲ ವ್ಯಾವಹಾರಿಕ ಅವಕಾಶಗಳನ್ನಷ್ಟೇ ಚರ್ಚೆ ಮಾಡುತ್ತಿಲ್ಲ. ಹಿಂದೆಂದಿಗಿಂತಲೂ ಹೆಚ್ಚಿನ ಸಂಪರ್ಕ ಹೊಂದಿರುವ ಹಾಗೂ ಭವಿಷ್ಯದಲ್ಲಿ ಹೆಚ್ಚು ಸಮೃದ್ಧಿಯನ್ನು ತರುವ ನೀಲನಕ್ಷೆಯನ್ನು ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ನಿಮಗೆಲ್ಲಾ ತಿಳಿದಿರುವಂತೆ ಬೆಂಗಳೂರು ಕರ್ನಾಟಕದ ರಾಜಧಾನಿ ಮಾತ್ರವಲ್ಲದೆ ಭಾರತದ ಸಿಲಿಕಾನ್ ವ್ಯಾಲಿ ಕೂಡ ಹೌದು. ಈ ನಗರವು ಭಾರತದ ತಂತ್ರಜ್ಞಾನ ಕ್ರಾಂತಿಯ ಮುಂಚೂಣಿಯಲ್ಲಿರುವುಲ್ಲದೇ ನಾವೀನ್ಯತೆ, ಉದ್ಯಮಶೀಲತೆ ಮತ್ತು ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯ ಕೇಂದ್ರವಾಗಿ ಮುಂದುವರೆದಿದೆ. ದೃಢವಾದ ವ್ಯವಹಾರಗಳನ್ನು ಪೋಷಿಸುವ ನಮ್ಮ ಬದ್ಧತೆ ಅಚಲವಾದುದು.

ಅಭಿವೃದ್ಧಿ ಮತ್ತು ಯಶಸ್ಸಿಗೆ ಪೂರಕವಾದ ವಾತಾವರಣವನ್ನು ಸೃಜಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ. ಕರ್ನಾಟಕ ವೈವಿಧ್ಯಮಯ ಸಂಪನ್ಮೂಲಗಳ ನಾಡು. ಕೌಶಲ್ಯಭರಿತ ಕಾರ್ಯಪಡೆಯಿಂದ ಹಿಡಿದು ನೈಸರ್ಗಿಕ ಸಂಪತ್ತಿನವರೆಗೆ, ವೇಗವಾಗಿ ಬೆಳೆಯುತ್ತಿರುವ ಸ್ಟಾರ್ಟ್ ಅಪ್ ಸಂಸ್ಕೃತಿಯಿಂದ ಹಿಡಿದು ಸದೃಢ ಉತ್ಪಾದನಾ ತಳಪಾಯ ಇಲ್ಲಿದೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!