HomeLife Styleಕರ್ನಾಟಕ ಹವಾಮಾನ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ

ಕರ್ನಾಟಕ ಹವಾಮಾನ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ

For Dai;y Updates Join Our whatsapp Group

Spread the love

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೂ, ನಿನ್ನೆ ಹಲವೆಡೆ ಒಣಹವೆಯ ವಾತಾವರಣ ಕಂಡುಬಂದಿತು. ಹವಾಮಾನ ಇಲಾಖೆಯ ವರದಿ ಪ್ರಕಾರ, ಇಂದು ಕೂಡ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆಯೇ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಕಂಡುಬರುವ ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲಗಳಲ್ಲಿ ಮಳೆಯ ಸಾಧ್ಯತೆ ಬಹಳ ಕಡಿಮೆ ಇದ್ದು, ಸಂಪೂರ್ಣವಾಗಿ ಒಣಹವೆಯೇ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಒಣಹವೆಯ ವಾತಾವರಣವಿರಲಿದೆ ಎಂದು ವರದಿ ಹೇಳಿದೆ.ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಂಪೂರ್ಣ ಒಣಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಬೆಂಗಳೂರು ನಗರದಲ್ಲಿ, ಇಂದು ಮೋಡ ಕವಿದ ವಾತಾವರಣೆ ಇರಲಿದ್ದು, ಗಾಳಿಯ ವೇಗ ಪ್ರತಿ ಗಂಟೆಗೆ 14 ಕಿಮೀ ಇರಲಿದೆ. ನಗರದ ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!