ವಿಜಯಸಾಕ್ಷಿ ಸುದ್ದಿ, ಗದಗ: ಗದಗದ ಕಾಶೀ ವಿಶ್ವನಾಥ ನಗರದ ಶ್ರೀ ಕಾಶೀವಿಶ್ವನಾಥನ ಜಾತ್ರಾ ಮಹೋತ್ಸವ, ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ೩೪ನೇ ವರ್ಷದ ಸಾಮೂಹಿಕ ವಿವಾಹ ಸೇರಿದಂತೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೆ. ೪ರಿಂದ ೬ರವರೆಗೆ ಜರುಗಲಿವೆ.
ಸೆ. ೪ರಂದು ಮಧ್ಯಾಹ್ನ ಸಾಮೂಹಿಕ ವಿವಾಹ, ಧರ್ಮಸಭೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ ಶ್ರೀ ಕಾಶೀವಿಶ್ವನಾಥನ ಮಹಾರಥೋತ್ಸವ ಜರುಗಲಿದೆ. ಸೆ. ೫ರಂದು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಸನ್ಮಾನ, ಸಾಂಸ್ಕೃತಿಕ ಹಾಗೂ ಪಾರಿತೋಷಕ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಸೆ. ೬ರಂದು ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಮೂರು ದಿನಗಳ ಕಾರ್ಯಕ್ರಮಗಳಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸುವರು ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.



