HomeGadag Newsಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡಿ: ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ

ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡಿ: ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡುವಂತೆ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಸೂಕ್ತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ ಸೂಚನೆ ನೀಡಿದರು.

ಅವರ ಬುಧವಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಬಸ್ ನಿಲ್ದಾಣದ ಸ್ವಚ್ಛತೆ ಹಾಗೂ ಕಂಟ್ರೋಲ್ ಚಾರ್ಟ್ ಪರಿಶೀಲಿಸಿ ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡುವಂತೆ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಸೂಕ್ತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದರು.

ಹಲವಾರು ದಿನಗಳಿಂದ ಬಂದ್ ಆಗಿರುವ ಪಟ್ಟಣದ ಬಸ್‌ನಿಲ್ದಾಣಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ತಕ್ಷಣ ಸರಿಪಡಿಸಿ ಸಾರ್ವಜನಿಕ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ಘಟಕಕ್ಕೆ ಭೇಟಿ ನೀಡಿ ಇಪಿಕೆಎಂ 54.99 ಇರುವ ಬಗ್ಗೆ ಹರ್ಷ ವ್ಯಕ್ತಪಡಿಸಿ ಜನಸಾಂದ್ರತೆಗೆ ಅನುಗುಣವಾಗಿ ಇನ್ನು 25 ಅನುಸೂಚಿಗಳನ್ನು ಹೆಚ್ಚಿಸುವಂತೆ ಸೂಚಿಸಿದರು. ಸಿಬ್ಬಂದಿಗಳ ವಸತಿ ಗೃಹಗಳಿಗೆ ಭೇಟಿ ನೀಡಿದ ಅವರು, ವಸತಿ ಗೃಹಗಳ ವ್ಯವಸ್ಥೆ ಮತ್ತು ಸ್ವಚ್ಚತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಸ್ಥಳಕ್ಕೆ ಆಗಮಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ, ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಸೂಕ್ತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ, ಸ್ಥಳೀಯ ಸಾರಿಗೆ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರಲ್ಲದೆ, ಹೆಚ್ಚಿನ ಹೊಸ ಬಸ್‌ಗಳನ್ನು ನೀಡುವಂತೆ ಮನವಿ ಮಾಡಿದರು.

ಮುಂಬರುವ ದಿನಗಳಲ್ಲಿ ಸವದತ್ತಿ ಯಲ್ಲಮ್ಮ ಹಾಗೂ ಮೈಲಾರ ಜಾತ್ರೆ ಇರುವ ಹಿನ್ನೆಲೆಯಲ್ಲಿ ಎರಡು ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳು ಗೈರು ಹಾಜರಿ ಕಡಿಮೆಗೊಳಿಸಿ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಿ ಹೆಚ್ಚಿನ ಆದಾಯ ಸಂಗ್ರಹಿಸಿ ಘಟಕದ ಧನಾತ್ಮಕ ಬೆಳವಣಿಗೆಗೆ ಶ್ರಮಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ. ದೇವರಾಜ, ವಿಭಾಗೀಯ ಸಾರಿಗೆ ಅಧಿಕಾರಿ ಪಿ.ವಿ. ಮೇತ್ರಿ, ಘಟಕ ವ್ಯವಸ್ಥಾಪಕಿ ಸವಿತಾ ಆದಿ ಉಪಸ್ಥಿತರಿದ್ದರು.

ಶಿರಹಟ್ಟಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ನಿಲ್ದಾಣದ ಶುಚಿತ್ವ, ಬಸ್‌ಗಳ ಕಾರ್ಯಾಚರಣೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಪರಿಶೀಲಿಸಿದರು. ಚಾಲನಾ ಸಿಬ್ಬಂದಿಗಳ ಕುಂದುಕೊರತೆ ಆಲಿಸಿ ಬಗೆಹರಿಸುವದಾಗಿ ತಿಳಿಸಿದರು. ಶಿರಹಟ್ಟಿ ಘಟಕಕ್ಕೆ ಭೇಟಿ ನೀಡಿ ನಿಗದಿತ ಸಮಯಕ್ಕೆ ಅನುಸೂಚಿಗಳನ್ನು ಕಾರ್ಯಾಚರಣೆ ಮಾಡುವಂತೆ ತಿಳಿಸಿದರು. ತಡವಾಗಿ ಕಾರ್ಯಾಚರಣೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!