ಚಿಕ್ಕಮಗಳೂರು: ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಭವಿಸಿದ ವೇಳೆ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.



