ಕೋಲಾರ: ಕಂಟೇನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು–ಗಂಗವರಂ ಸಮೀಪ ನಡೆದಿದೆ.
ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕಾರು, ಮುಂದಿನ ಕಂಟೇನರ್‌ಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಒಳಗಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಲಮನೇರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರೆದಿದೆ.



