ಕೋಲಾರ: ರಾಜ್ಯ ಹೆದ್ದಾರಿ ಜಿಲ್ಲೆಯ ಕೇಂದ್ರದಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಸುಮಾರು 1.30 ಗಂಟೆಗೆ ತೊರಾಂಡಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ, ಕಾರು ಕೆರೆಗೆ ಬಿದ್ದ ಪರಿಣಾಮ ಕಾರ್ ನಲ್ಲಿದ್ದ ತೊರಾಂಡಹಳ್ಳಿ ಗ್ರಾಮದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ.ವೆಂಕಟೇಶ್ ಮೃತಪಟ್ಟಿದ್ದಾರೆ.
ಕಾರು ಕೆರೆಗೆ ಬಿದ್ದಿರುವ ವಿಷಯ ಬೆಳಗ್ಗೆ 9 ಗಂಟೆಯವರೆಗೂ ಯಾರಿಗೂ ತಿಳಿಯಲಿಲ್ಲ. ಸ್ಥಳೀಯರು ಅನುಮಾನಗೊಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರು ಮತ್ತು ಮೃತದೇಹ ಸತ್ತ ಸ್ಥಿತಿಯಲ್ಲಿ ಇರುವುದು ತಿಳಿದು ಬಂದಿದೆ.



