ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಆಂಧ್ರಪ್ರದೇಶ ಮೂಲದ ಬಶೀರ್ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ರಾಯಲ್ಪಾಡು ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.



