ಕೊಪ್ಪಳ:- ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ಐದು ವರ್ಷ ಬಾಲಕ ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವಂತಹ ಘಟನೆ ಜರುಗಿದೆ.
ಸಾವು ಗೆದ್ದುಬಂದ ಬಾಲಕನನ್ನು ಮಹಮ್ಮದ್ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ಐದು ವರ್ಷದ ಬಾಲಕ ಮಹಮ್ಮದ್ ಹ್ಯಾರಿಸ್ ನಿನ್ನೆ ಮಧ್ಯಾಹ್ನ ಮೊದಲನೇ ಮಹಡಿಯಲ್ಲಿ ಪೇಪರ್ನಿಂದ ಪಾರಿವಾಳ ಮಾಡಿ ಆಟವಾಡುತ್ತಿದ್ದ. ಅದನ್ನು ಗಾಳಿ ತೂರಿ ಹಿಡಿಯಲು ಹೋದಾಗ ಮೊದಲನೇ ಮಹಡಿಯಿಂದ ಕೆಳಗಡೆ ಬಿದ್ದಿದ್ದಾನೆ. ಮಹಮ್ಮದ್ ಕೆಳಗಡೆ ಬಿಳ್ಳುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.
ಮನೆಯ ಕೆಳಗಡೆ ಮಹಮ್ಮದ್ ಹ್ಯಾರಿಸ್ ಸಹೋದರಿ ಕೂಡ ಆಟವಾಡುತ್ತಿದ್ದು, ಮಹಮ್ಮದ್ ಬಿದ್ದ ತಕ್ಷಣ ಮೇಲೆ ಎತ್ತಿದ್ದಾಳೆ. ಒಳಗಡೆಯಿಂದ ಪೋಷಕರು ಕಿರುಚುತ್ತಾ ಓಡೋಡಿ ಬಂದಿದ್ದಾರೆ. ಕೆಳಗಡೆ ಬಿದ್ದ ಮಗುವನ್ನ ಕೂಡಲೇ ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮಹಮ್ಮದ್ಗೆ 2 ಗಂಟೆಯೊಳಗೆ ಆಪರೇಷನ್ ಮಾಡಿದ್ದಾರೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.



