ಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಅವರಿಗೆ ಮತ್ತೊಂದು ಹಿನ್ನಡೆ ಎದುರಾಗಿದೆ. ಸರ್ಕಾರಿ ಹುದ್ದೆ ಮತ್ತು ಕಚೇರಿಯ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಹಣದ ಆಮಿಷಕ್ಕೆ ಒಳಗಾಗಿ ಸರ್ಕಾರಿ ಹುದ್ದೆಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಎಫ್‌ಐಆರ್‌ನಲ್ಲಿ ಸಂಬಂಧಿತ ಸೆಕ್ಷನ್‌ಗಳನ್ನು ಸೇರಿಸಲಾಗಿದೆ. ಕೆಪಿಎಸ್‌ಸಿ ಕಚೇರಿಯಲ್ಲಿ ಸಿಐಡಿ ಅಧಿಕಾರಿಗಳು ಇಂದು (ಸೆಪ್ಟೆಂಬರ್ 3) ಮಹಜರು ನಡೆಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದ ಹಿನ್ನೆಲೆಯಲ್ಲಿ ಗ್ಯಾನೇಂದ್ರ ಅವರ ಕೊಠಡಿಯಲ್ಲಿ ಈ ಮಹಜರು ನಡೆದಿದ್ದು, ಬಳಿಕ ಸಿಐಡಿ ಅಧಿಕಾರಿಗಳು ಗ್ಯಾನೇಂದ್ರ ಅವರನ್ನು ಕರೆದೊಯ್ದಿದ್ದಾರೆ.



