HomeKarnataka Newsಕುಂಭಮೇಳ ಕಾಲ್ತುಳಿತ ಪ್ರಕರಣ: ಇದು ವಿರೋಧಿಗಳ ಷಡ್ಯಂತ್ರ ಎಂದ ಪ್ರಮೋದ್ ಮುತಾಲಿಕ್!

ಕುಂಭಮೇಳ ಕಾಲ್ತುಳಿತ ಪ್ರಕರಣ: ಇದು ವಿರೋಧಿಗಳ ಷಡ್ಯಂತ್ರ ಎಂದ ಪ್ರಮೋದ್ ಮುತಾಲಿಕ್!

For Dai;y Updates Join Our whatsapp Group

Spread the love

ಹುಬ್ಬಳ್ಳಿ:- ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ವಿರೋಧಿಗಳ ಷಡ್ಯಂತ್ರದಿಂದ ಪ್ರಯಾಗ್‌ರಾಜ್‌‌ನಲ್ಲಿ ಇಂತಹ ಘಟನೆ ನಡೆದಿದೆ. ನ್ಯಾಯಾಂಗ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಗಡೆ ಬರಬೇಕು. ಈ ಕೃತ್ಯ ಎಸಗಿದ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ಘಟನೆ ಅತ್ಯಂತ ಖೇದಕರವಾಗಿದ್ದು, ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ನಾವು ಈಗಾಗಲೇ ಪ್ರಯಾಗ್‌ರಾಜ್ ಪ್ರಯಾಣ ಮಾಡಿ ಬಂದಿದ್ದೇವೆ. ಅಲ್ಲಿ ಬಹಳಷ್ಟು ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ. ಕೋಟಿಗಟ್ಟಲೇ ಜನರಿಗೆ ವ್ಯವಸ್ಥೆ ಮಾಡುವುದು ಅಷ್ಟು ಸುಲಭದ ಮಾತಲ್ಲ. ಮೌನಿ ಅಮಾವಾಸ್ಯೆ ದಿನ ಎಂಟು ಕೋಟಿ ಜನರು ಸ್ನಾನಕ್ಕೆ ಬಂದಿದ್ದರು ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಇಂತಹ ಘಟನೆ ಆಗಬಾರದು, ಈಗ ನಡೆದು ಹೋಗಿದೆ. ಇದಕ್ಕೆ ವಿರೋಧ ಪಕ್ಷದವರು ಬೇರೆ ಬೇರೆ ನಾಟಕವನ್ನ ಆಡುತ್ತಿದ್ದಾರೆ‌. ಈ ಹಿಂದೆ ನೆಹರೂ ಅಲ್ಲಿಯ ಕುಂಭಮೇಳಕ್ಕೆ ಬಂದಾಗ ನೂಕುನುಗ್ಗಲು ನಡೆದು 800 ಜನರು ಸಾವನ್ನಪ್ಪಿದ್ದರು. ಕಾಂಗ್ರೆಸ್‌ನವರು 800 ಜನರನ್ನ ಕೊಂದು ಹಾಕಿದ್ದಾರೆ. ಅಖಿಲೇಶ್ ಅವರೇ 2013 ರಲ್ಲಿ ಕುಂಭಮೇಳವಾದಾಗ ಸಾವಾಗಿವೆ. ಈ ಸಾವಿನಲ್ಲಿ ರಾಜಕೀಯ ಮಾಡಬಾರದು ಎಂದು ಮುತಾಲಿಕ್ ಮಾಹಿತಿ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!