HomeBengaluru Newsಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನತೆ

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನತೆ

For Dai;y Updates Join Our whatsapp Group

ಬೆಂಗಳೂರು: ನಗರದ ಹೊರವಲಯದ ಬ್ಯಾಡರಹಳ್ಳಿ ಹಾಗೂ ಭಾರತನಗರ ಪ್ರದೇಶಗಳಲ್ಲಿ ಚಿರತೆ ಆತಂಕ ಇನ್ನೂ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಒಂದೇ ಪ್ರದೇಶದಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ.

ನಿನ್ನೆ ಇಡೀ ದಿನ ಅರಣ್ಯ ಇಲಾಖೆ ಸಿಬ್ಬಂದಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದರೂ ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ಮಂಗಳವಾರ ರಾತ್ರಿ ಸುಮಾರು 9.30ರ ವೇಳೆಗೆ ಹಾಗೂ ಬುಧವಾರ ಮುಂಜಾನೆ 4.30ರ ಸುಮಾರಿಗೆ ಮತ್ತೆ ಅದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಚಿರತೆ ರಸ್ತೆಯಲ್ಲಿ ವೇಗವಾಗಿ ಓಡಿ ಬೇಲಿಯನ್ನು ಹಾರಿ ತೆರಳುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಿರಂತರ ಕಾರ್ಯಾಚರಣೆಯ ನಡುವೆಯೂ ಚಿರತೆ ಮತ್ತೆ ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸುವುದರ ಜೊತೆಗೆ ಅರಣ್ಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನಕ್ಕೂ ಕಾರಣವಾಗಿದೆ.

ಚಿರತೆಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಸೆರೆಹಿಡಿಯಲು ಅರಣ್ಯ ಇಲಾಖೆ ಇಂದಿನ ಕಾರ್ಯಾಚರಣೆಯಲ್ಲಿ ಡ್ರೋನ್‌ಗಳನ್ನೂ ಬಳಸಲು ಸಿದ್ಧತೆ ನಡೆಸಿದೆ. ಚಿರತೆ ಚಲನವಲನವನ್ನು ನಿಖರವಾಗಿ ಪತ್ತೆಹಚ್ಚುವ ಉದ್ದೇಶದಿಂದ ತಾಂತ್ರಿಕ ನೆರವು ಪಡೆದು ಶೋಧ ಕಾರ್ಯ ತೀವ್ರಗೊಳಿಸಲಾಗುತ್ತಿದೆ.

ನಗರ ವಿಸ್ತರಣೆ ಮತ್ತು ಕಾಡು ಪ್ರದೇಶಗಳ ಕುಗ್ಗುವಿಕೆಯಿಂದ ಕಾಡುಪ್ರಾಣಿಗಳ ಸಹಜ ಆವಾಸಸ್ಥಾನಗಳು ನಾಶವಾಗುತ್ತಿದ್ದು, ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಅವು ನಗರ ಪ್ರದೇಶಗಳಿಗೆ ಪ್ರವೇಶಿಸುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರ ಓಡಾಡದಂತೆ ಹಾಗೂ ಚಿರತೆ ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img