HomeGadag Newsಅನುದಾನ ಸಮರ್ಪಕವಾಗಿ ಸದ್ಭಳಕೆಯಾಗಲಿ

ಅನುದಾನ ಸಮರ್ಪಕವಾಗಿ ಸದ್ಭಳಕೆಯಾಗಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನವು ಸಮರ್ಪಕವಾಗಿ ಸದ್ಬಳಕೆಯಾಗಬೇಕು. ನಿಗದಿತ ಅವಧಿಯೊಳಗೆ ಯೋಜನೆಯ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಮೀಸಲಿರಿಸಿದ ಅನುದಾನವು ಅವರಿಗೇ ತಲುಪಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರುವಂತೆ ನಿಗಾ ವಹಿಸಬೇಕು. ಸೌಲಭ್ಯ ತಲುಪಿಸುವಲ್ಲಿ ವಿನಾಕಾರಣ ವಿಳಂಬವಾದರೆ ಸಂಬಂಧಿತ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದರು.

ಅರ್ಹ ಫಲಾನುಭವಿಗಳಿಗೆ ನೀಡುವ ಸೌಲಭ್ಯಗಳು ಗುಣಮಟ್ಟದಿಂದ ಕೂಡಿರುವ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಂಡು ವಿತರಣೆ ಮಾಡಬೇಕು. ನಿರ್ದಿಷ್ಟ ಸಮುದಾಯದ ಕಾಲೋನಿಗಳಲ್ಲಿಯೇ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಖಚಿತಪಡಿಸಿಕೊಂಡು ಕಾಮಗಾರಿ ಅನುಷ್ಟಾನಗೊಳಿಸುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, 2025-26 ನೇ ಸಾಲಿನ 31-5-2025ರ ಅಂತ್ಯದವರೆಗೆ ಎಸ್‌ಸಿ-ಎಸ್‌ಪಿ ಯೋಜನೆಯಡಿ ಜಿಲ್ಲೆಗೆ ವಿವಿಧ ಇಲಾಖೆಗಳಿಗೆ ಒಟ್ಟಾರೆ 2156.82 ಲಕ್ಷರೂ. ಬಿಡುಗಡೆಯಾಗಿದೆ. ಆ ಪೈಕಿ 1113.43 ಲಕ್ಷ ರೂ. ಖರ್ಚಾಗಿದ್ದು, 21734 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದಾರೆ.

ಟಿ.ಎಸ್.ಪಿ.ಯೋಜನೆಯಡಿ 2025-26ನೇ ಸಾಲಿನ 31-5-2025ರ ಅಂತ್ಯದವರೆಗೆ ವಿವಿಧ ಇಲಾಖೆಗಳಿಗೆ 737.20 ಲಕ್ಷ ರೂ. ಬಿಡುಗಡೆಯಾಗಿದ್ದು, ಆ ಪೈಕಿ 394.80 ಲಕ್ಷ ರೂ. ಖರ್ಚಾಗಿರುತ್ತದೆ. 14675 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ್ರ ಕೊಟ್ಟೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮಾತನಾಡಿ, ಸರ್ಕಾರದ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಾಗ ಕಡ್ಡಾಯವಾಗಿ ಶಿಷ್ಟಾಚಾರ ಪಾಲನೆಯಾಗಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸುವಾಗ ಒಂದು ವಾರ ಮುಂಚಿತವಾಗಿಯೇ ಜಿಲ್ಲಾಡಳಿತದ ಅನುಮೋದನೆ ಪಡೆಯುವುದು ಕಡ್ಡಾಯ. ಶಿಷ್ಟಾಚಾರ ಪರಿಪಾಲನೆ ಮಾಡುವಾಗ ಉದಾಸೀನತೆ ಮಾಡಬಾರದು ಎಂದು ನಿರ್ದೇಶನ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!