HomeHaveriಶೀಘ್ರವೇ ಹಾಸ್ಟೆಲ್‌ಗಳ ಕಾರ್ಯಾರಂಭವಾಗಲಿ :ಬಸವರಾಜ ಬೊಮ್ಮಾಯಿ

ಶೀಘ್ರವೇ ಹಾಸ್ಟೆಲ್‌ಗಳ ಕಾರ್ಯಾರಂಭವಾಗಲಿ :ಬಸವರಾಜ ಬೊಮ್ಮಾಯಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರಾದ 5 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೆಟ್ರಿಕ್ ನಂತರದ ಐದು ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಸರ್ಕಾರ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವ ಕುರಿತು ವಿಳಂಬ ಧೋರಣೆ ಅನುಸರಿಸಿದ್ದು, ತಡವಾಗಿಯಾದರೂ ಹುದ್ದೆಗಳನ್ನು ಸೃಜಿಸಿ ಆದೇಶಿಸಿರುವುದು ಸ್ವಾಗತಾರ್ಹ. ನಮ್ಮ ಅವಧಿಯಲ್ಲಿ ಮೂರು ಕಟ್ಟಡಗಳ ನಿರ್ಮಾಣ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ವಿದ್ಯಾರ್ಥಿ ನಿಲಯಗಳ ಕಾರ್ಯಾರಂಭ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಬೇಕೆಂದು ಆಗ್ರಹಿಸುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img