ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜಮುಖಿ ಸೇವಾ ಕಾರ್ಯಗಳ ಭಾಗವಾಗಿ ಗದಗ-ಬೆಟಗೇರಿ ಲಯನ್ಸ್ ಕ್ಲಬ್ ವತಿಯಿಂದ ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಗತ್ಯವಿರುವ ಆರು ಒಳರೋಗಿಗಳಿಗೆ ವಾಕರ್ಗಳನ್ನು ಹಾಗೂ ಸುಮಾರು 100ಕ್ಕೂ ಹೆಚ್ಚು ರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕಟ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಮಾತನಾಡಿ, ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳುತ್ತಿರುವ ಲಯನ್ಸ್ ಕ್ಲಬ್ನ ಸೇವಾ ಮನೋಭಾವ ಶ್ಲಾಘನೀಯವಾಗಿದ್ದು, ಇಂತಹ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರವೀಣ ವಾರಕರ, ಕಾರ್ಯದರ್ಶಿ ಲಿಂಗರಾಜ ತೋಟದ, ಖಜಾಂಚಿ ರೇಣುಕಾಪ್ರಸಾದ ಶಿಗ್ಲಿಮಠ, ಲಯನ್ಸ್ ಮಹಿಳಾ ಘಟಕದ ಅಧ್ಯಕ್ಷೆ ಅಮೃತಾ ವಾರಕರ, ಕಾರ್ಯದರ್ಶಿ ಅಪರ್ಣಾ ತೋಟದ, ಖಜಾಂಚಿ ಪ್ರಿಯಾ ಶಿಗ್ಲಿಮಠ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ವಿನಾಯಕ ಪಂಚಗಾರ, ಡಾ. ಮಹಾಂತೇಶ ಪಾಟೀಲ, ಡಾ. ರಾಜಶೇಖರ ಪಾಟೀಲ, ರಾಜು ವೇರ್ಣೆಕರ, ರಮೇಶ ಶಿಗ್ಲಿ, ಅನಂತ ಅಮೀಚಂದ, ಸಂತೋಷ ಕಬಾಡರ, ವೀರಣ್ಣ ಪಟ್ಟಣಶೆಟ್ಟಿ, ನಿತೀಶ್ ಸಾಲಿ, ದತ್ತು ಬೇವಿನಕಟ್ಟಿ, ಶಿವಪ್ರಭು ನೀಲಗುಂದ, ಗೌತಮ್ ಗಡ್ಡಿ, ನೇತ್ರಾ ಗಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಅಗತ್ಯವಿರುವವರಿಗೆ ನೆರವಾಗುತ್ತಿರುವ ಲಯನ್ಸ್ ಕ್ಲಬ್ನ ಕಾರ್ಯ ಶ್ಲಾಘನೀಯ.”
– ಡಾ. ಬಸವರಾಜ ಬೊಮ್ಮನಹಳ್ಳಿ
ನಿರ್ದೇಶಕರು, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ



