ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ನೀಲಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಎಲ್‌ಕೆಜಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಧರಿಸಿ ಎಲ್ಲರ ಗಮನ ಸೆಳೆದರು. ಬಣ್ಣಬಣ್ಣದ ವೇಷಭೂಷಣಗಳಲ್ಲಿ ಕಂಗೊಳಿಸಿದ ಪುಟಾಣಿಗಳ ಸಂಭ್ರಮ ಶಾಲಾ ಆವರಣದಲ್ಲಿ ವಿಶೇಷ ಆಕರ್ಷಣೆಯಾಗಿತ್ತು.



