ಚಾಮರಾಜನಗರ: ನಡುರಸ್ತೆಯಲ್ಲೇ ಲಾರಿಯೊಂದು ಪಲ್ಟಿ ಹೊಡೆದು ಹಳ್ಳಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಾಮರಾಜನಗರ ಹೊರವಲಯದಲ್ಲಿ ಜರುಗಿದೆ. ಗಾಯಗೊಂಡವರನ್ನು ನಂಬಿ ಊರು ಹಾಗೂ ದಾಮೋದರನ್ ನಂಬಿ ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಲಾರಿ ಏಕಾಏಕಿ ಪಲ್ಟಿ ಹೊಡೆದ ಪರಿಣಾಮ ಇಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ. ಚಾಮರಾಜನಗರ ಹೊರವಲಯದಿಂದ ಸತ್ಯಮಂಗಲಕ್ಕೆ ಕುಳ್ಳೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಎಸ್ಕೇಪ್ ಆಗಿದ್ದಾನೆ.
ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಗಾಯಾಳುಗಳನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.



