ಬೆಂಗಳೂರು / ನವದೆಹಲಿ, ಮಾರ್ಚ್ 18:
ಮಧ್ಯಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮವಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಉಂಟಾಗಿದೆ. ಇದರ ಪರಿಣಾಮವಾಗಿ ಕಮರ್ಷಿಯಲ್ ಸಿಲಿಂಡರ್‌ಗಳ ಪೂರೈಕೆ ವ್ಯತ್ಯಯಗೊಂಡಿದ್ದು, ಹೋಟೆಲ್ ಉದ್ಯಮ ಗಂಭೀರ ಸಂಕಷ್ಟಕ್ಕೆ ಸಿಲುಕಿದೆ.
ಈ ಬಿಕ್ಕಟ್ಟನ್ನು ದುರುಪಯೋಗಪಡಿಸಿಕೊಂಡು ಕೆಲವು ಖದೀಮರು ಗೃಹಬಳಕೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಅಕ್ರಮ ತಡೆಗಾಗಿ ದೇಶಾದ್ಯಂತ ಪೊಲೀಸರು ವ್ಯಾಪಕ ದಾಳಿ ನಡೆಸಿದ್ದು, 12 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆದಿದೆ. ಈ ವೇಳೆ ಸುಮಾರು 15 ಸಾವಿರ ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ದೆಹಲಿಯಲ್ಲಿ 600 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದ್ದು, ಉತ್ತರ ಪ್ರದೇಶದಲ್ಲಿ 405 ತಪಾಸಣೆಗಳು ನಡೆದಿದ್ದು 10 ಮಂದಿಯನ್ನು ಬಂಧಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ 504 ದಾಳಿ ನಡೆಸಿ ಎಫ್‌ಐಆರ್ ದಾಖಲಿಸಲಾಗಿದೆ.
ಕರ್ನಾಟಕದಲ್ಲಿಯೂ ಕ್ರಮ ಮುಂದುವರಿದಿದ್ದು, ಬೀದರ್ನಲ್ಲಿ 105 ಸಿಲಿಂಡರ್‌ಗಳು, ದಾವಣಗೆರೆ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 20 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.
ಇದರ ಮಧ್ಯೆ, ಕಮರ್ಷಿಯಲ್ ಗ್ಯಾಸ್ ಕೊರತೆ ಹಿನ್ನೆಲೆಯಲ್ಲಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರಿ ತೈಲ ಕಂಪನಿಗಳಿಗೆ ಸಮರ್ಪಕ ಪೂರೈಕೆ ಮಾಡಲು ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದೆ.



