ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಗುಚಿ ಬಿದ್ದಿದೆ. ಇದರ ಪರಿಣಾಮ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಿರಂತರವಾಗಿ ನೀರು ಹಾಯಿಸಲಾಯಿತು.
ಮಂಗಳೂರಿನಿಂದ ಮತ್ತೊಂದು ಟ್ಯಾಂಕರ್ ತರಿಸಿ ಅನಿಲವನ್ನು ವರ್ಗಾಯಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



