HomeMandyaಮದ್ದೂರು ಗಣೇಶೋತ್ಸವ: 10 ಸಾವಿರಕ್ಕೂ ಹೆಚ್ಚು ಜನರ ನಿರೀಕ್ಷೆ, ರಾಜಕೀಯ ಶಕ್ತಿ ಪ್ರದರ್ಶನಕ್ಕೆ ದೋಸ್ತಿ ಸಜ್ಜು

ಮದ್ದೂರು ಗಣೇಶೋತ್ಸವ: 10 ಸಾವಿರಕ್ಕೂ ಹೆಚ್ಚು ಜನರ ನಿರೀಕ್ಷೆ, ರಾಜಕೀಯ ಶಕ್ತಿ ಪ್ರದರ್ಶನಕ್ಕೆ ದೋಸ್ತಿ ಸಜ್ಜು

For Dai;y Updates Join Our whatsapp Group

ಮಂಡ್ಯ: ಮದ್ದೂರಿನಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಬೃಹತ್ ರೂಪ ನೀಡಿದ್ದು, 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಸಿದ್ಧತೆ ನಡೆದಿದೆ. ಸೆ.16ರಂದು ನಡೆಯಲಿರುವ ಮೆರವಣಿಗೆಯಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಕಳೆದ ವರ್ಷದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಂಡಿದೆ.

ಮದ್ದೂರು ಪಟ್ಟಣ ಮತ್ತು ಸುತ್ತಮುತ್ತಲಿನ ಬಡಾವಣೆಗಳು ಹಾಗೂ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳನ್ನು ಒಂದೆಡೆ ಸೇರಿಸಿ ಸಾಮೂಹಿಕವಾಗಿ ವಿಸರ್ಜನೆ ಮಾಡಲಾಗುತ್ತದೆ. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರು ಭಾಗವಹಿಸಲಿದ್ದು, ಮೈತ್ರಿ ಪಕ್ಷಗಳ ರಾಜಕೀಯ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ.

ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎರಡೂ ಪಕ್ಷಗಳ ಹಲವು ಶಾಸಕರು ಹಾಗೂ ಮಾಜಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ರಾಮ್ ರಹೀಂ ನಗರ ಪ್ರದೇಶದಲ್ಲಿ ಮಸೀದಿಯೊಂದರ ಮುಂಭಾಗ ಧ್ವನಿವರ್ಧಕ ಮತ್ತು ನೃತ್ಯದ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಕಿಡಿಗೇಡಿಗಳು ಮೆರವಣಿಗೆಯತ್ತ ಕಲ್ಲು ಹಾಗೂ ಬಾಟಲಿಗಳನ್ನು ಎಸೆದಿದ್ದರು ಎನ್ನಲಾಗಿದ್ದು, ಹಲವು ಭಕ್ತರು ಗಾಯಗೊಂಡಿದ್ದರು. ಘಟನೆಯಿಂದ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದಾದ ಬಳಿಕ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದವು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ 20ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು.

ಘಟನೆಯ ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಮದ್ದೂರು ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಬಾರಿ ಮೆರವಣಿಗೆ ಮತ್ತು ಸಾಮೂಹಿಕ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಪಿ ಪಡೆಗಳೊಂದಿಗೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img