HomeBengaluru Newsಮೀಟರ್ ರೀಡಿಂಗ್ ಸ್ಥಗಿತ: ಜುಲೈ ಬಿಲ್ ಸರಾಸರಿ ಆಧಾರದಲ್ಲಿ ನೀಡಲು ಬೆಸ್ಕಾಂ ನಿರ್ಧಾರ!

ಮೀಟರ್ ರೀಡಿಂಗ್ ಸ್ಥಗಿತ: ಜುಲೈ ಬಿಲ್ ಸರಾಸರಿ ಆಧಾರದಲ್ಲಿ ನೀಡಲು ಬೆಸ್ಕಾಂ ನಿರ್ಧಾರ!

For Dai;y Updates Join Our whatsapp Group

ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ಬೆಸ್ಕಾಂ ಗ್ರಾಹಕರಿಗೆ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ. ಬದಲಾಗಿ ಕಳೆದ ಮೂರು ತಿಂಗಳ ವಿದ್ಯುತ್ ಬಳಕೆಯ ಸರಾಸರಿ ಆಧಾರದ ಮೇಲೆ ಬಿಲ್ ನೀಡಲಾಗುತ್ತದೆ.

ಬೆಸ್ಕಾಂ ಪ್ರಕಟಣೆ ಪ್ರಕಾರ, ಜುಲೈ ತಿಂಗಳ ವಿದ್ಯುತ್ ಬಿಲ್ ಅನ್ನು ಕಳೆದ ಮೂರು ತಿಂಗಳ ಸರಾಸರಿ ಬಳಕೆಯನ್ನು ಆಧರಿಸಿ ಸಿದ್ಧಪಡಿಸಿ, ಗ್ರಾಹಕರ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ.

ಆದರೆ ಎಚ್‌ಟಿ ಗ್ರಾಹಕರು, 40 ಎಚ್‌ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್‌ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಬಳಕೆದಾರರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಎಂದಿನಂತೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್ ನೀಡಲಾಗುತ್ತದೆ.

ಸರಾಸರಿ ಬಿಲ್‌ನಲ್ಲಿ ಹೆಚ್ಚು ಅಥವಾ ಕಡಿಮೆ ಮೊತ್ತ ಬಂದಿದ್ದರೆ, ಆಗಸ್ಟ್ ತಿಂಗಳಿಂದ ನೈಜ ಮೀಟರ್ ರೀಡಿಂಗ್ ಆರಂಭವಾದ ಬಳಿಕ ಅದನ್ನು ಮುಂದಿನ ಬಿಲ್‌ನಲ್ಲಿ ಹೊಂದಾಣಿಕೆ ಮಾಡಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.

ಗೃಹ ಜ್ಯೋತಿ ಯೋಜನೆಯ ಪರಿಶೀಲನೆಗಾಗಿ ಮನೆಗಳಿಗೆ ಬರುವ ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳಿಗೆ ಸಾರ್ವಜನಿಕರು ಸಹಕರಿಸಬೇಕು. ಈ ವೇಳೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಪಡಿತರ ಚೀಟಿ ಅಥವಾ ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗಾಗಿ ತೋರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img