ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಗದಗ ನಗರದ ವಿವಿಧ ಭಾಗಗಳಲ್ಲಿ ಹೈಮಾಸ್ಟ್ ದೀಪ ಅಳವಡಿಸುವ ಕಾಮಗಾರಿಗೆ ಮಂಗಳವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಜಾಮಿಯಾ ಮಸ್ಜೀದ್ (ಮರ್ಕಜ್) ಹತ್ತಿರದ ಪಟೇಲ್ ರಸ್ತೆಯ ಬಳಿ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭಾ ಸದಸ್ಯರು, ಗಣ್ಯರು ಮತ್ತು ಹಿರಿಯರು ಉಪಸ್ಥಿತರಿದ್ದರು.



