HomePolitics Newsಬೊಮ್ಮಾಯಿ ಗೆಲುವಿನಿಂದ ಹೊಸ ಹುರುಪು : ಡಾ.ಚಂದ್ರು ಲಮಾಣಿ

ಬೊಮ್ಮಾಯಿ ಗೆಲುವಿನಿಂದ ಹೊಸ ಹುರುಪು : ಡಾ.ಚಂದ್ರು ಲಮಾಣಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸುತ್ತಿದ್ದಂತೆಯೇ ಪಟ್ಟಣ ಸೇರಿ ತಾಲೂಕಿನಾದ್ಯಂತ ಕಾರ್ಯಕರ್ತರು ಪಟಾಕಿ ಸಿಡಿಸಿ, ಬಣ್ಣ ಎರಚಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು, ಪಟ್ಟಣದ ಸೋಮೇಶ್ವರ ದೇವಸ್ಥಾನ, ಆಂಜನೇಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ನಿರೀಕ್ಷೆಯಂತೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿ ಮತ್ತೆ ಜನತೆ ಆಶೀರ್ವಾದ ಮಾಡಿದ್ದಾರೆ ಎಂದರು.

MLA Dr. Activists celebrated the victory under the leadership of Chandra Lamani

ಈ ವೇಳೆ ಶಿರಹಟ್ಟಿ ಮಂಡಲದ ಬಿಜೆಪಿ ಅಧ್ಯಕ್ಷ ಸುನಿಲ ಮಹಾಂತ ಶೆಟ್ಟರ, ನಗರ ಅಧ್ಯಕ್ಷ ನವೀನ ಬೆಳ್ಳಟ್ಟಿ, ಎಂ.ಆರ್. ಪಾಟೀಲ್, ವಿಜಯಕುಮಾರ ಹತ್ತಿಕಾಳ, ನೀಲಪ್ಪ ಹತ್ತಿ, ಸೋಮೇಶ ಉಪನಾಳ, ಪೂರ್ಣಾಜಿ ಕರಾಟೆ, ಅನಿಲ ಮುಳುಗುಂದ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ, ಶಿವಯೋಗಿ ಅಂಕಲಕೋಟಿ, ಬಸವರಾಜ ಮಡಿವಾಳರ, ವಿಜಯ ಕುಂಬಾರ, ರಮೇಶ ಹಾಳದೋಟದ, ದುಂಡೆಶ ಕೋಟಗಿ, ಈರಣ್ಣ ಪೂಜಾರ, ಪ್ರಕಾಶ ಮಾದನೂರ, ಟಾಕಪ್ಪ ಸಾತಪುತೆ, ಪರಸಣ್ಣ ಇಮ್ಮಡಿ, ಜಗದೀಶಗೌಡ ಪಾಟೀಲ, ಹಾಲಪ್ಪ ಸೂರಣಗಿ, ರವಿಕುಮಾರ ಕೋರಿ, ಮಂಜುನಾಥ ರಾಮಗೇರಿ ಸೇರಿ ಅನೇಕ ಕಾರ್ಯಕರ್ತರಿದ್ದರು.

ಯಾವುದೇ ಸಮಸ್ಯೆಯಿಲ್ಲದೇ ಮತ್ತೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಲಿದ್ದು, ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಅವರ ಗೆಲುವು ಕ್ಷೇತ್ರದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img